ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಜ.೨೫ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

 


ಶಾಲಾ ಸಮಾಜವಿಜ್ಞಾನ ಶಿಕ್ಷಕ ದಿನೇಶ್ ಬಿ.,ಯವರು ಮಾತನಾಡಿ ‘ಪಬ್ರಲ ಪ್ರಜಾಪ್ರಭುತ್ವಕ್ಕಾಗಿ, ಸಾಕ್ಷರತಾ ಮತದಾರರು’ ಎಂಬುದು ಈ ದಿನದ ಧ್ಯೇಯವಾಕ್ಯ. ಯುವ ಮತದಾರರನ್ನು ಪ್ರೋತ್ಸಾಹಿಸುವುದು, ಮತದಾನದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿ ಶಾಲೆಗಳಲ್ಲಿ ಈ ದಿನದ ಆಚರಣೆಯ ಮಹತ್ವವನ್ನು ಸಂಕ್ಷಿಪ್ತವಾಗಿ ವಿವರಿಸಿ, ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಶಾಲಾ ಮುಖ್ಯ ಶಿಕ್ಷಕ ಸತೀಶ್ ಭಟ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here