ಮೈಸೂರಿನ ಎಸ್.ಎಲ್.ವಿ.ಬುಕ್ಸ್ ಇಂಡಿಯಾ ಪ್ರೈವೇಟ್ ಲಿ. ಮಾಲಕ ದಿವಾಕರದಾಸ್ ರವರಿಗೆ ಸಂಪ್ಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ವತಿಯಿಂದ ಗೌರವಾರ್ಪಣೆ

0

ಪುತ್ತೂರು: ಸಂಪ್ಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಹೂವಿನ ಅಲಂಕಾರ ಮಾಡಿಸಿಕೊಟ್ಟ ಮೈಸೂರಿನ ಎಸ್.ಎಲ್.ವಿ.ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಮಾಲಕ ಇಡ್ಕಿದು ಗ್ರಾಮದ ನೇರ್ಲಾಜೆ ದಿ.ರಾಮದಾಸ್, ದಿ. ಸುಂದರಿ ರಾಮದಾಸ್ ರವರ ಪುತ್ರ ದಿವಾಕರ ದಾಸ್ ನೇರ್ಲಾಜೆ ರವರನ್ನು ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ ಸುರೇಶ್ ಪುತ್ತುರಾಯ, ಉತ್ಸವ ಸಮಿತಿ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾರ್ತ ಇಳಂತಾಜೆ ಹಾಗೂ ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here