ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಾಚಿದೇವ ಜಯಂತಿ ದಿನಾಚರಣೆ

0

ಪುತ್ತೂರು:ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಮಡಿವಾಳರ ಸಂಘದ ಆಶ್ರಯದಲ್ಲಿ ಮಡಿವಾಳ ಮಾಚಿದೇವ ಜಯಂತಿಯನ್ನು ಫೆ.೧ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಿದರು.

ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್‌ರವರು ದೀಪ ಪ್ರಜ್ವಲನೆ ಮಾಡಿ, ಮಡಿವಾಳ ಮಾಚಿದೇವ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಿ ಮಡಿವಾಳ ಮಾಚಿದೇವರವರ ಜೀವನ, ಸಾಧನೆಯನ್ನು ವಿವರಿಸಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾಗಿರುವ ತಹಶೀಲ್ದಾರ್ ರಮೇಶ್ ಬಾಬು ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಡಿವಾಳರ ಸಂಘದ ಅಧ್ಯಕ್ಷ ಪಿ.ಎನ್ ಸುಭಾಶ್ಚಂದ್ರ, ನಗರ ಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ಪ್ರೋಬೇಷನರಿ ಪೌರಾಯುಕ್ತ ಅಕ್ರಂ ಷಾ, ಗ್ರೇಡ್-2 ತಹಶಿಲ್ದಾರ್ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖಾಧಿಕಾರಿಗಳು, ಮಡಿವಾಳರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಾಲೂಕು ಕಚೇರಿ ದಯಾನಂದ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here