ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಆಟೋ ಚಾಲಕನ ಬಂಧನ

0

ವಿಟ್ಲ: ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

 


ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ. ಪರಿಚಯದ ಅಪ್ರಾಪ್ತ ಬಾಲಕಿಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ಅಬ್ದುಲ್ ನಾಸಿರ್ ಆ ಬಳಿಕ ಆಕೆಯ ಮನೆಗೆ ಆಗಾಗ ಬರುತ್ತಿದ್ದ. ಮನೆಗೆ ಬಾರದಂತೆ ಆತನಿಗೆ ಎಚ್ಚರಿಕೆ ನೀಡಿ ಬಳಿಕ ಬಾಲಕಿಯನ್ನು ವಿಚಾರಣೆ ನಡೆಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here