ಕಾಣಿಯೂರು: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆ

0

  • ಸರಕಾರದ ಜನಪರ ಯೋಜನೆ ಜನತೆಗೆ ತಲುಪಿಸಬೇಕು- ಎಸ್ ಅಂಗಾರ

ಕಾಣಿಯೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಅನೇಕ ಜನಪರ ಕಾರ್ಯ ಯೋಜನೆ, ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಆ ಮೂಲಕ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯ ಸಚಿವರು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಎಸ್.ಅಂಗಾರ ಹೇಳಿದರು. ಅವರು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದರು.

 

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾರ್ಯದರ್ಶಿ ಇಂದಿರಾ ಬಿ.ಕೆ, ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪ್ರಮೀಳಾ ಜನಾರ್ದನ, ಕಡಬ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ, ಬೆಳಂದೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಮೋಹನ್ ಅಗಳಿ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಕಾಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ತಾರಾನಾಥ ಕಾಯರ್ಗ, ಪುಣ್ಚಪ್ಪಾಡಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಮಹೇಶ್ ಸವಣೂರು, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ನಾಣಿಲ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವೀರಪ್ಪ ಗೌಡ ಉದ್ಲಡ್ಡ, ದೋಳ್ಪಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ಚಾರ್ವಾಕ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ವಿಶ್ವನಾಥ ದೇವಿನಗರ, ಕಾಣಿಯೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ಬೆದ್ರಾಜೆ, ಬೆಳಂದೂರು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷೆ ಚಂಪಾಕುಶಾಲಪ್ಪ ಗೌಡ ಅಬೀರ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿದೇಶಕ ಧರ್ಮೇಂಧ್ರ ಗೌಡ ಕಟ್ಟತ್ತಾರು, ಕಾಣಿಯೂರು ಗ್ರಾ.ಪಂ. ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಪ್ರವೀಣ್‌ಚಂದ್ರ ರೈ ಕುಮೇರು, ತೇಜ ಕುಮಾರಿ ಉದ್ಲಡ್ಡ, ಕೀರ್ತಿ ಕುಮಾರಿ ಅಂಬುಲ, ಸುಲೋಚನಾ ಮಿಯೋಳ್ಪೆ, ಅಂಬಾಕ್ಷಿ ಕೂರೇಲು, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಮಘದ ಅಧ್ಯಕ್ಷ ಗಣೇಶ್ ನಿಡ್ವಣಾಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here