ಕನಕಮಜಲು: ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ

0

 

ಕನಕಮಜಲು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವು ಸೆ.21ರಂದು ಜರುಗಿತು.
ಅಂಗನವಾಡಿ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಜುಬೈದ ಅವರು ಅಧ್ಯಕ್ಷತೆ ವಹಿಸಿದ್ದರು. ಸಮುದಾಯ ಆರೋಗ್ಯ ಅಧಿಕಾರಿ ಕು. ಪ್ರಿಯಾಂಕಾ ಅವರು ಸಮತೋಲನ ಆಹಾರ ಹಾಗೂ ಪೌಷ್ಟಿಕ ಆಹಾರದ ಕುರಿತು ಮಾಹಿತಿ ನೀಡಿ, ಮಕ್ಕಳ ತಾಯಂದಿರು ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರು ತಂದ ಪೌಷ್ಟಿಕ ಆಹಾರದಲ್ಲಿರುವ ಪೋಷಕಾಂಶಗಳ ಬಗ್ಗೆ ತಿಳಿಸಿದರು.


ಈ ಸಂದರ್ಭದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿಯ ಸದಸ್ಯ ಅಬ್ದುಲ್ ಮಜೀದ್, ಗ್ರಾ.ಪಂ.‌ ಸದಸ್ಯ ಇಬ್ರಾಹಿಂ ಕಾಸಿಂ ಕನಕಮಜಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಗನವಾಡಿ ಪುಟಾಣಿಗಳಿಂದ ಪೋಷಣ್ ಮಾಸಾಚರಣೆ ಬಗ್ಗೆ ಪೋಷಣೆ ಮಾಡಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವನಜ ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಜಯಂತಿ ಸಹಕರಿಸಿದರು.

LEAVE A REPLY

Please enter your comment!
Please enter your name here