ಪೌರಕಾರ್ಮಿಕರ ದಿನಾಚರಣೆ ಉದ್ಘಾಟನೆ

0

 

ಸುಳ್ಯ ನಗರ ಪಂಚಾಯತ್ ಕಚೇರಿಯ ಸಮುದಾಯ ಭವನದಲ್ಲಿ ಪೌರಕಾರ್ಮಿಕರ ದಿನಾಚರಣೆಯ ಉದ್ಘಾಟನೆಯು ಇಂದು ನಡೆಯಿತು.
ನ ಪಂ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ತಹಶೀಲ್ದಾರ್ ಕು। ಅನಿತಾಲಕ್ಷ್ಮಿ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಪೌರಕಾರ್ಮಿಕರ ಬದುಕು ಏನು? ಎತ್ತ? ಎಂಬ ವಿಚಾರದ ಬಗ್ಗೆ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಚಾರ್ಯರಾದ ಸೀತಾರಾಮ ಕೇವಳ ಉಪನ್ಯಾಸ ನೀಡಿದರು. ನ. ಪಂ.ನ ಎಲ್ಲ ಪೌರಕಾರ್ಮಿಕರನ್ನು ವೇದಿಕೆಗೆ ಕರೆದು ಸನ್ಮಾನಿಸಲಾಯಿತು.
ನಪಂ ಉಪಾಧ್ಯಕ್ಷೆ ಶ್ರೀಮತಿ ಸರೋಜಿನಿ ಪೆಲ್ತಡ್ಕ, ವಿಪಕ್ಷ ನಾಯಕ ಬಾಲಕೃಷ್ಣ ಭಟ್ ಕೊಡೆಂಕಿರಿ ಮತ್ತು ಎಲ್ಲಾ ನ. ಪಂ. ಸದಸ್ಯರುಗಳು ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಎಂ. ಎಚ್. ಸುಧಾಕರ್ ಸ್ವಾಗತಿಸಿದರು. ದ್ವಿತೀಯ ದರ್ಜೆ ಸಹಾಯಕ ಸುದೇವ್ ಕೆ. ವಂದಿಸಿದರು. ನಾಮನಿರ್ದೇಶಿತ ಸದಸ್ಯ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here