ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸಂಪಾಜೆ ಗ್ರಾ.ಪಂ. ಆಯ್ಕೆ

0

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕಳೆದ ವರ್ಷ ಆಯ್ಕೆಯಾಗಿದ್ದ ಸಂಪಾಜೆ ಗ್ರಾಮ ಪಂಚಾಯತ್ ಸೇರಿ ರಾಜ್ಯದ 176 ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ಮೊತ್ತ ತಲಾ 5 ಲಕ್ಷದಂತೆ ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

2020-21ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕಳೆದ ವರ್ಷವೇ ಗ್ರಾಮ ಪಂಚಾಯತ್‌ಗಳನ್ನು ಆಯ್ಕೆ ಮಾಡಲಾಗಿದ್ದರೂ ಪ್ರಶಸ್ತಿ ಮೊತ್ತ ಬಿಡುಗಡೆ ಮಾಡಿರಲಿಲ್ಲ ಮತ್ತು ಪ್ರಶಸ್ತಿ ಪ್ರದಾನ ನಡೆಯಲಿಲ್ಲ.  ಸುಳ್ಯ ತಾಲೂಕಿನ ಸಂಪಾಜೆ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಐದು ಪಂಚಾಯತ್‌ಗಳು ಗಾಂಧಿಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ರಾಜ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಗ್ರಾಮ ಪಂಚಾಯಿತಿಗಳನ್ನು ಪ್ರೋತ್ಸಾಹಿಸಲು 2013-14ನೇ ಸಾಲಿನಿಂದ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಿ ತಲಾ ರೂ.5 ಲಕ್ಷಗಳ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುತ್ತಿದೆ. 250 ಅಂಕಗಳ ಪುಶ್ನಾವಳಿಗಳಿಗೆ ಉತ್ತರಿಸುವ ಮೂಲಕ ರಾಜ್ಯದ ಗ್ರಾಮ ಪಂಚಾಯತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ಅತೀ ಹೆಚ್ಚು ಅಂಕಗಳನ್ನು ಗಳಿಸಿರುವ ತಾಲೂಕಿನ ಐದು ಗ್ರಾಮ ಪಂಚಾಯತಿಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿ, ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾಗಿತ್ತು. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದ ತಂಡವು ಮಾರ್ಗಸೂಚಿಗಳನಸಾರ ಸ್ಥಳ, ದಾಖಲೆಗಳನ್ನು ಪರಿಶೀಲನೆ ಮಾಡಿ ವರದಿಯನ್ನು ಜಿಲ್ಲಾ ಪಂಚಾಯಿತಿಗೆ ಸಲ್ಲಿಸಲಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿಯು 176 ತಾಲೂಕುಗಳಿಗೆ ಮಿತಿಗೊಳಿಸಿ, ತಾಲ್ಲೂಕಿಗೆ ಒಂದರಂತೆ ಗ್ರಾಮ ಪಂಚಾಯತಿಗಳನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಆಯ್ಕೆ ಮಾಡಿ ಶಿಫಾರಸ್ಸು ಮಾಡಲಾಗಿತ್ತು.

LEAVE A REPLY

Please enter your comment!
Please enter your name here