ಸುಳ್ಯದಲ್ಲಿ ಅಪರಾಧ ತನಿಖಾ ವಿಮರ್ಶಣಾ ಸಭೆ

0

 

ಸುಳ್ಯ ಪೊಲೀಸ್ ವೃತ್ತ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪುತ್ತೂರು ವಿಭಾಗದ ಡಿ ವೈ ಎಸ್ ಪಿ ವೀರಯ್ಯ ಹಿರೇಮಠ ರವರ ನೇತೃತ್ವದಲ್ಲಿ ಅಪರಾಧ ವಿಮರ್ಶನ ಸಭೆ ಇಂದು ಸುಳ್ಯ ಪೊಲೀಸ್ ಠಾಣಾ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ತನಿಖೆಗಳ ಮತ್ತು ತನಿಖೆಗೆ ಬಾಕಿಇರುವ ಪ್ರಕರಣಗಳ ಮಾಹಿತಿಯನ್ನು ಡಿವೈಎಸ್ಪಿ ಯವರು ಅಧಿಕಾರಿಗಳಿಂದ ಪಡೆದುಕೊಂಡರು. ಆರೋಪ ಪಟ್ಟಿಯನ್ನು ದಾಖಲಿಸಿ ನ್ಯಾಯಾಲಯಕ್ಕೆ ನೀಡಲು ತಡವಾಗಿರುವ ಕೆಲವು ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಪಡೆದು ಶೀಘ್ರಗತಿಯಲ್ಲಿ ಈ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆಗಳನ್ನು ನಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕಿರಿಯ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.


ಸುಳ್ಯ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಸಾರ್ವಜನಿಕರೊಂದಿಗೆ ಜನಸ್ನೇಹಿ ಮಾಹಿತಿ ಅರಿವು ನೀಡುವ ಮೂಲಕ ಅಪರಾಧಗಳನ್ನು ತಡೆಗಟ್ಟುವಲ್ಲಿ ಶ್ರಮಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರಜೋಗಿ, ಪೊಲೀಸ್ ಠಾಣಾ ಉಪ ನಿರೀಕ್ಷಕ ದಿಲೀಪ್, ಸುಳ್ಯ ಠಾಣಾ ತನಿಖಾ ಪಿಎಸ್ಐ ರತ್ನಕುಮಾರ್,ಎಸ್ ಡಿ ಪಿ ಒ ವಿಭಾಗದ ಮುಖ್ಯಸ್ಥರಾದ ವಿಶ್ವನಾಥ್, ಕೃಷ್ಣಪ್ಪ, ದೇವರಾಜ್,
ಬೆಳ್ಳಾರೆ ಠಾಣಾ ಉಪನಿರೀಕ್ಷಕ ಸುಹಾಸ್, ಎ ಎಸ್ ಐ ಸುಧಾಕರ್, ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಮಂಜುನಾಥ್, ಸಂಧ್ಯಾ ಮಣಿ, ಪ್ರೊಭೆಷನಲ್ ಎಸ್ ಐ ಗಳಾದ ಸವಿತಾ, ಸರಸ್ವತಿ, ಹಾಗೂ ಇನ್ನಿತರ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here