ಅ. 4-5: ಬಾಳಿಲದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ

0

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ. 4 ಮತ್ತು 5ರಂದು ಬಾಳಿಲ ವಿದ್ಯಾಬೋಧಿನೀ ಹಿ. ಪ್ರಾ. ಶಾಲಾ ವಠಾರದಲ್ಲಿ ಜರಗಲಿದೆ.
ಅ. 4 ರಂದು ಬೆಳಿಗ್ಗೆ 9ಕ್ಕೆ ಶಾರದಾ ದೇವಿಯ ವಿಗ್ರಹ ಆಗಮನ, ಗಣಪತಿ ಹವನ, ಶಾರದಾದೇವಿಯ ಪ್ರತಿಷ್ಠೆ, ಕಿರೀಟಧಾರಣೆ, ಶಾರದಾದೇವಿಗೆ ಚಿನ್ನದ ಕರಿಮಣಿ ಹಾಗೂ ತಾಳಿ ಸಮರ್ಪಣೆ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ  ಮುಖ್ಯಸ್ಥರಾದ ದೇರಣ್ಣ ರೈ ಬಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಮತ್ತು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಯಶೋಧರ ನಾರಾಲು ಭಾಗವಹಿಸಲಿದ್ದಾರೆ. ಬೆಳಿಗ್ಗೆ ಬಾಬು ಅಜಿಲ ಬಾಳಿಲ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 11.30 ರಿಂದ ಮುಕ್ತ ಮತ್ತು 40 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಜರಗಲಿದೆ. ಪುರುಷರಿಗೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ಅಂಗನವಾಡಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದೆ. ಅಪರಾಹ್ನ 11.30ರಿಂದ ಸಾರ್ವಜನಿಕ ಮಹಿಳೆಯರಿಗೆ ಲಲಿತ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಲಿದೆ. ಸಂಜೆ 7.00 ಗಂಟೆಗೆ ಮೆಸ್ಕಾಂ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ವಿಕ್ರಂರಿಗೆ ಸೇವಾ ಪುರಸ್ಕಾರ ನಡೆಯಲಿದೆ. ಬಳಿಕ ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದ ಲೇಲೆ ಪಾಡಡೆ ತುಳು ಹಾಸ್ಯ ನಾಟಕ ನಡೆಯಲಿದೆ.

ಅ. 5ರಂದು ಬೆಳಿಗ್ಗೆ 10ರಿಂದ ಶ್ರೀರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.00 ಗಂಟೆಯಿಂದ ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು.ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಹಿಂದೂ ಜಾಗರಣ ವೇದಿಕೆಯ ಬ. ಗಣರಾಜ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ರಾವ್ ಕಡಬ ಇವರಿಗೆ ರಾಮಚಂದ್ರ ಕೆದಿಲ ಸ್ಮರಣಾರ್ಥ ಶ್ರೀ ಶಾರದೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಸ್.ಎಸ್.ಎಲ್.ಸಿ. ಸಾಧಕರಿಗೆ ಮತ್ತು ವಿಶೇಷ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಬಳಿಕ ತಾಳನಿನಾದಂ ಭಜನಾ ತಂಡ ಪಡ್ಪಿನಂಗಡಿ ಇವರಿಂದ ಕುಣಿತ ಭಜನೆ ನಡೆಯಲಿದೆ. ಅಪರಾಹ್ನ ಕುಣಿತ ಭಜನೆ, ಚೆಂಡೆವಾದನ ಗೊಂಬೆ ಕುಣಿತ, ಬ್ಯಾಂಡ್ ವಾದನ ಸೇರಿದಂತೆ ವಿಶೇಷ ಆಕರ್ಷಣೆಯೊಂದಿಗೆ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ನಡೆಯ ಬೊಮ್ಮಣಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.

LEAVE A REPLY

Please enter your comment!
Please enter your name here