ಪಂಜ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ

0

 

ಪಂಜದಲ್ಲಿ ಕಚೇರಿ ಹೊಂದಿರುವ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ವಿಶ್ವರಂಜಿನಿಯವರ ಅಧ್ಯಕ್ಷತೆಯಲ್ಲಿ ಪಂಜದ ವಿ.ಕೆ. ರೆಸಿಡೆನ್ಸಿ ಸಭಾಂಗಣದಲ್ಲಿ ನಡೆಯಿತು. ಮಹಾಮಂಡಲದ ನಿರ್ದೇಶಕ ವಿಜಯಕುಮಾರ್ ಸೊರಕೆ, ಅಣ್ಣಿ ಪೂಜಾರಿ ಮತ್ತು ಸುಬ್ರಹ್ಮಣ್ಯ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕೃತ ಡಾ. ರವಿ ಕಕ್ಕೆಪದವು ಅತಿಥಿಗಳಾಗಿ ಭಾಗವಹಿಸಿದ್ದರು. ಆಂತರಿಕ ಲೆಕ್ಕ ಪರಿಶೋಧಕ ಬಿ. ರತ್ನಾಕರ ಗೌಡ, ಉಪಾಧ್ಯಕ್ಷ ಕೃಷ್ಣ ಕುಮಾರ್ ಅಲೆಕ್ಕಾಡಿ ಮತ್ತು ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಹಿರಿಯ ಸದಸ್ಯರಿಗೆ ಹಾಗೂ ಹಿರಿಯ ಮೂರ್ತೆದಾರರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯದರ್ಶಿ ದಿವ್ಯಶ್ರೀ ವರದಿ ವಾಚಿಸಿದರು.
ಅದ್ಯಕ್ಷ ವಿಶ್ವನಾಥ ಪೂಜಾರಿ ಕೆ ಸ್ವಾಗತಿಸಿ ನಿರ್ದೇಶಕ ಚಿನ್ನಪ್ಪ ಪೂಜಾರಿ ಬಳ್ಪ ವಂದಿಸಿದರು.

LEAVE A REPLY

Please enter your comment!
Please enter your name here