ಮುಕ್ರಂಪಾಡಿಯಲ್ಲಿ ಸತ್ಯನಾರಾಯಣ ಪೂಜೆಯ ಸುವರ್ಣ ಸಂಭ್ರಮಕ್ಕೆ ಚಾಲನೆ

0

ಪುತ್ತೂರು: ಮುಕ್ರಂಪಾಡಿಯ ಸುಭದ್ರ ಸಭಾ ಮಂದಿರದ ಬಳಿಯ ಅಶ್ವತ್ಥಕಟ್ಟೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ವತಿಯಿಂದ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ಸುವರ್ಣ ಸಂಭ್ರಮದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಗೆ ಫೆ.5ರಂದು ಚಾಲನೆ ದೊರೆತಿದೆ. 


ವೇ.ಮೂ ಉದಯನಾರಾಯಣ ಕಲ್ಲೂರಾಯರವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಪತಿ ಹೋಮ, ಅಶ್ವತ್ಥನಾರಾಯಣ ಪೂಜೆಯೊಂದಿಗೆ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ಬಳಿಕ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುಗೈ ದಾನಿ ವಿ.ಕೆ ಜೈನ್ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ ರೈ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಮಾರ್ತ, ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿ ಸಂತೋಷ್ ಕೆ.ಮೊಟ್ಟೆತ್ತಡ್ಕ ಉಪಸ್ಥಿತರಿದ್ದರು. ಸಮಿತಿ ಉಪಾಧ್ಯಕ್ಷೆ ಪ್ರಮೀತಾ ಸಿ.ಹಾಸ್ ಸ್ವಾಗತಿಸಿ, ವಂದಿಸಿದರು, ಶೈಲಜಾ ಸುದೇಶ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಮೃದ್ಧಿ ಮ್ಯೂಸಿಕಲ್ಸ್‌ನವರಿಂದ ಭಕ್ತಿ ರಸಮಂಜರಿ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆಯ ಬಳಿಕ ಆಂಜನೇಯ ಮಹಿಳಾ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ತಾಳಮದ್ದಳೆ ಜರುಗಿತು.

LEAVE A REPLY

Please enter your comment!
Please enter your name here