ಲಂಚ, ಭ್ರಷ್ಟಾಚಾರಕ್ಕೆ ಬಹಿಷ್ಕಾರ-ಉತ್ತಮ ಸೇವೆಗೆ ಪುರಸ್ಕಾರ ; ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಜ್ಞೆ

0

ಪುತ್ತೂರು: ಇಲ್ಲಿನ ಶಿವರಾಮ ಕಾರಂತ ಪ್ರೌಢಶಾಲೆಯಲ್ಲಿ ಶನಿವಾರ `ಲಂಚ ಭ್ರಷ್ಟಾಚಾರಕ್ಕೆ ಬಹಿಷ್ಕಾರ, ಉತ್ತಮ ಸೇವೆಗೆ ಪುರಸ್ಕಾರ’ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಮುಖ್ಯಶಿಕ್ಷಕಿ ಜಲಜಾಕ್ಷಿ ಕೆ.ಎಸ್., ಇಂದಿನ ದಿನಕ್ಕೆ ಬಹಳ ಮುಖ್ಯವಾದ ಅಭಿಯಾನವನ್ನು ಸುದ್ದಿ ಕೈಗೆತ್ತಿಕೊಂಡಿದೆ. ವಿದ್ಯಾರ್ಥಿ ದೆಸೆಯಲ್ಲೇ ಸಾಮಾಜಿಕ ಪಿಡುಗುಗಳ ಬಗ್ಗೆ ಮಾಹಿತಿ ಅರಿತುಕೊಂಡರೆ, ಭವಿಷ್ಯದಲ್ಲಿ ಭ್ರಷ್ಟಾಚಾರವನ್ನು ಇಲ್ಲವಾಗಿಸಬಹುದು ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕ ಸಂಘದ ಅಧ್ಯಕ್ಷರೂ ಶಿಕ್ಷಕರೂ ಆದ ಅಬ್ರಹಾಂ, ಈಗಾಗಲೇ ಹಲವು ಅಭಿಯಾನಗಳನ್ನು ಸುದ್ದಿ ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಇದೀಗ ಲಂಚ ಭ್ರಷ್ಟಾಚಾರದ ವಿರುದ್ಧ ಅಭಿಯಾನವನ್ನು ಕೈಗೆತ್ತಿಕೊಂಡಿದ್ದು, ಇದಕ್ಕೆ ಎಲ್ಲರೂ ಬೆಂಬಲ ನೀಡಿದ್ದಾರೆ. ಸರಕಾರಿ ಇಲಾಖೆಗಳ ಹಂತದಲ್ಲಿ ಇದು ನಿಲ್ಲಬೇಕಾಗಿದ್ದು. ವಿದ್ಯಾರ್ಥಿಗಳು ಲಂಚ ನೀಡುವುದಿಲ್ಲ ಹಾಗೂ ಕೊಡುವುದಿಲ್ಲ ಎಂದು ಪ್ರತಿಜ್ಞೆಯನ್ನು ಕೈಗೆತ್ತಿಕೊಳ್ಳಬೇಕು.

ಸುದ್ದಿ ಜನಾಂದೋಲನ ವೇದಿಕೆ ಮುಖ್ಯಸ್ಥ ಗಣೇಶ್ ಎನ್. ಕಲ್ಲರ್ಪೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರ ವರದಿಗಾರ ವಸಂತ್ ಹಾಗೂ ಶಾಲಾ ಶಿಕ್ಷಕರಾದ ನಾರಾಯಣ ನಾಯ್ಕ, ಅನ್ನಮ್ಮ ಪಿ.ಎಸ್., ನಳಿನಿ, ಸುರೇಖಾ, ವೀಣಾ, ಚಾಂದಿನಿ, ಪ್ರಮೀಳಾ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here