ಪುತ್ತೂರು ಮಹಾಲಿಂಗೇಶ್ವರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಸೌತಡ್ಕ ಸಹಿತ ರಾಜ್ಯದ 25 ದೇವಸ್ಥಾನಗಳು ಕಾಶಿ ಮಾದರಿಯಲ್ಲಿ ಅಭಿವೃದ್ಧಿ

0

 

                                                         ಮಹಾಲಿಂಗೇಶ್ವರ ದೇವಸ್ಥಾನ
                                                                ಸುಬ್ರಹ್ಮಣ್ಯ ದೇವಸ್ಥಾನ
                                                          ಸೌತಡ್ಕ ಶ್ರೀ ಮಹಾಗಣಪತಿ ದೇವಳ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇವಸ್ಥಾನಗಳ ಸಮಗ್ರ ಅಭಿವೃದ್ದಿಯ ಕನಸು ಹೊಂದಿದ್ದು, ರಾಜ್ಯದಲ್ಲಿಯೂ ಇದನ್ನು ಅನುಷ್ಠಾನಗೊಳಿಸುವತ್ತ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದ 25 ಎ ದರ್ಜೆಯ ದೇವಸ್ಥಾನಗಳನ್ನು ಕಾಶಿ ಮಾದರಿಯಲ್ಲಿ ಸಮಗ್ರ ಅಭಿವೃದ್ಧಿಗೊಳಿಸಲು ಸರಕಾರ ಉದ್ದೇ ಶಿಸಿದ್ದು ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ,ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಬೆಳ್ತಂಗಡಿ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಗಳೂ ಇದರಲ್ಲಿ ಸೇರಿದೆ. ರಾಜ್ಯ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು ಈ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಎ ದರ್ಜೆಯ 25 ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ರೂಪಿಸುವ ಯೋಜನೆ ಇದಾಗಿದೆ. ಮೊದಲ ಹಂತದಲ್ಲಿ 25 ದೇವಸ್ಥಾನಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ದೇವಸ್ಥಾನದ ಮೂಲಭೂತ ಸೌಕರ್ಯ, ಒಣ ಮತ್ತು ಹಸಿ ತ್ಯಾಜ್ಯ ನಿರ್ವಹಣೆ ಸೇರಿದಂತೆ ಸರ್ವತೋಮುಖ ಅಭಿವೃದ್ದಿಗೊಳಿಸುವ ಯೋಜನೆ ಇದಾಗಲಿದೆ. ಮೊದಲ ಹಂತದ ಕಾಮಗಾರಿಗೆ ರೂ.1140 ಕೋಟಿ ಬೇಕಾಗಬಹುದೆಂದು ಅಂದಾಜಿಸಲಾಗಿದೆ.ಈ ನಿಟ್ಟಿನಲ್ಲಿ ರಾಜ್ಯದ ದೇವಸ್ಥಾನಗಳ ವ್ಯಾಪ್ತಿಯಲ್ಲಿರುವ ಜಮೀನುಗಳ ಸರ್ವೇ ಕಾರ್ಯ ಚುರುಕುಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here