ಅ.2 ರಂದು ‌ ಪಂಜದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

0

 

ಮಾಡಬಾಗಿಲು ಕಂಬಳ ಆನಂದ ಗೌಡ ಟ್ರಸ್ಟ್ ಕಂಬಳ 7ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಅ.2 ರಂದು ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ಜರಗಲಿದೆ. ಮಾಡಬಾಗಿಲು ಟ್ರಸ್ಟ್ ಅಧ್ಯಕ್ಷ ಬಿ.ಎಂ. ಆನಂದ ಗೌಡ ಕಂಬಳ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ನಿವೃತ್ತ ಪ್ರಾಂಶುಪಾಲ ಬಾಬು ಗೌಡ ರವರು ಕಾರ್ಯಕ್ರಮವನ್ನು ಉದ್ಘಾಟಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಎಸ್ ಪಿ , ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನೇಮಿರಾಜ ಪಲ್ಲೋಡಿ‌,ಪಂಜ ಸರಕಾರಿ ಪದವಿ ಪೂರ್ವ ಕಾಲೇಜು
ಪ್ರಾಂಶುಪಾಲ ವೆಂಕಪ್ಪ ಗೌಡ ಕೇನಾಜೆ, ಮುಖ್ಯ ಶಿಕ್ಷಕ ಟೈಟಸ್ ವರ್ಗೀಸ್, ಕಾಲೇಜು ಕಾರ್ಯಾಧ್ಯಕ್ಷ ಚೀನಪ್ಪ ಕಾಣಿಕೆ , ಎಸ್ ಡಿ ಎಂ ಸಿ ಅಧ್ಯಕ್ಷ ಗಣೇಶ್ ಜೋಯಿಸ, ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ 2021 -22ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಳ್ಯ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿ ವೇತನ, ಪುರಸ್ಕಾರ ನಡೆಯಲಿದೆ.ರೂ.10 ಲಕ್ಷದ ಶಾಶ್ವತ ವಿದ್ಯಾನಿಧಿಯ ಬಡ್ಡಿಯ ಹಣ ಗಳಿಕೆಯನ್ನು.ಕನ್ನಢ, ಗಣಿತ, ವಿಜ್ಞಾನ ವಿಷಯದಲ್ಲಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಮತ್ತು ಪುರಸ್ಕಾರ ನೀಡಲಿದ್ದಾರೆ.

LEAVE A REPLY

Please enter your comment!
Please enter your name here