ಪುತ್ತೂರು: ಪಳ್ಳತ್ತೂರು ಸಮೀಪದ ವಿವಾಹಿತ ವ್ಯಕ್ತಿಯೊಬ್ಬರು ಕಾಲೇಜು ವಿದ್ಯಾರ್ಥಿನಿಯೊಬ್ಬರಿಗೆ ಕಿರುಕುಳ ನೀಡುತ್ತಿರುವ ಕುರಿತು ಆರೋಪ ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ವ್ಯಕ್ತಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ವಿವಾಹಿತ ವ್ಯಕ್ತಿ ಹಲವು ಬಾರಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದು, ಫೆ.7ರಂದು ಪುತ್ತೂರು ಬಸ್ ನಿಲ್ದಾಣದಲ್ಲಿ ಚೀಟಿಯೊಂದನ್ನು ವಿದ್ಯಾರ್ಥಿನಿಗೆ ನೀಡಿ ವಿವಾಹ ಆಗುವಂತೆ ಒತ್ತಾಯಿಸಿರುವುದಾಗಿ ಆರೋಪ ವ್ಯಕ್ತವಾಗಿದೆ. ಘಟನೆ ಕುರಿತು ನೊಂದ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.