ಭಾರತ್ ಜೋಡೊ ಯಾತ್ರೆಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಸಾವಿರಕ್ಕೂ ಅಧಿಕ ಮಂದಿ ಭಾಗಿ : ಪಿ.ಸಿ.ಜಯರಾಮ್

0

ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಆರಂಭಗೊಂಡಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸಿದ್ದಾರೆ.
ಸೆ.27ರಂದು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಈ ವಿವರ ನೀಡಿದರು.


ಭಾರತದ ಐಕ್ಯತೆಗಾಗಿ ನಡೆಯುತ್ತಿರುವ ಈ ರ್‍ಯಾಲಿ ಕನ್ಯಾಕುಮಾರಿಯಿಂದ ಆರಂಭಗೊಂಡಿದೆ. ಕೇರಳಕ್ಕೆ ತಲುಪಿರುವ ಈ ಯಾತ್ರೆ ಸೆ.30ರಂದು ಕರ್ನಾಟಕಕ್ಕೆ ಆಗಮಿಸಲಿದೆ. ಇಲ್ಲಿ 22 ದಿನಗಳ ಕಾಲ ಇರಲಿದ್ದು, ಗುಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶ ಪಡೆಯಲಿದೆ. ಅಂದು ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ೧ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ವಕ್ತಾರ ಭರತ್ ಮುಂಡೋಡಿ, ಕಾಂಗ್ರೆಸ್ ಪ್ರಮುಖರಾದ ಪಿ.ಎಸ್.ಗಂಗಾಧರ್, ಮಹಮ್ಮದ್ ಕುಂಞಿ ಗೂನಡ್ಕ, ಸಚಿನ್ ಶೆಟ್ಟಿ ಪೆರುವಾಜೆ, ಸುರೇಶ್ ಎಂ.ಹೆಚ್., ಡೇವಿಡ್ ಧೀರಾ ಕ್ರಾಸ್ತ, ಸದಾನಂದ ಮಾವಜಿ, ಭವಾನಿಶಂಕರ ಕಲ್ಮಡ್ಕ, ಶಶಿಧರ್ ಎಂ.ಜೆ. ಇದ್ದರು.

LEAVE A REPLY

Please enter your comment!
Please enter your name here