ಲಂಚ, ಭ್ರಷ್ಟಾಚಾರದ ವಿರುದ್ಧದ ಸುದ್ದಿಯ ಜನಾಂದೋಲನಕ್ಕೆ ನಗರ ಸಭಾ ಸಾಮಾನ್ಯ ಸಭೆಯಲ್ಲಿ ಬೆಂಬಲ, ಘೋಷಣೆ

0

ಪುತ್ತೂರು: ನಗರ ಸಭೆಯಲ್ಲಿ ಫೆ.9ರಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿ ಜನಾಂದೋಲನ ವೇದಿಕೆ ವತಿಯಿಂದ ನಡೆಯುತ್ತಿರುವ ಜನಾಂದೋಲನದ ಅಭಿಯಾನಕ್ಕೆ ಬೆಂಬಲ, ಸೂಚಿಸಿ ಘೋಷಣೆ ಕೂಗಿದರು. ಜೀವಂಧರ್ ಜೈನ್ ಮಾತನಾಡಿ ಲಂಚ, ಭ್ರಷ್ಟಾಚಾರದ ವಿರುದ್ಧ ಸುದ್ದಿಯ ವತಿಯಿಂದ ಈಗಾಗಲೇ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಅಭಿಯಾನ ಪ್ರಾರಂಭವಾಗಿದ್ದು ಇದಕ್ಕೆ ನಮ್ಮ ಬೆಂಬಲವಿದೆ ಎಂದು ಹೇಳಿದರು. ನಗರ ಸಭಾ ಉಪಾಧ್ಯಕ್ಷೆ ವಿದ್ಯಾ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು ಹಾಗೂ ಪೌರಾಯುಕ್ತ ಮಧು ಎಸ್. ಮನೋಹರ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here