ಟಿಕ್‌ಟಾಕ್ ಖ್ಯಾತಿಯ ಕಮಲಜ್ಜಿ ನಿಧನ

0

ಬಂಟ್ವಾಳ : ಟಿಕ್‌ಟಾಕ್‌ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದ, ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಟಿಕ್‌ಟಾಕ್ ಕಮಲಜ್ಜಿ ಯಾನೆ ಕಮಲ (85ವ.) ರವರು ಫೆ.9ರಂದು ಸಂಜೆ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಆರು ಗಂಡು, ಮೂವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸಹಿತ ಅಭಿಮಾನಿಗಳನ್ನು ಅಗಲಿದ್ದಾರೆ. ಟಿಕ್‌ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ ೫೦ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬವೇ ಟಿಕ್‌ಟಾಕ್ ಫ್ಯಾಮಿಲಿ ಎಂದು ಹೆಸರು ಪಡೆದಿತ್ತು. ತಮ್ಮ ಇಳಿವಯಸ್ಸಿನಲ್ಲೂ ಇವರು ಟಿಕ್‌ಟಾಕ್ ವಿಡಿಯೋಗಳಲ್ಲಿ ತೋರುತ್ತಿದ್ದ ಅಭಿನಯ, ಮಾತಿನ ವೇಗ, ಮನೆಮಂದಿಯ ಜೊತೆ ಬೆರೆಯುತ್ತಿದ್ದ ದೃಶ್ಯಾವಳಿಗಳಿಂದಾಗಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಅವರು ಪಡೆದಿದ್ದರು. ಪ್ರಸೂತಿ ತಜ್ಞೆಯಾಗಿದ್ದ ಇವರು ಪರೋಪಕಾರ ಮನಸ್ಸಿನವರಾಗಿದ್ದರು.
ಸಂತಾಪ : ಕಮಲಜ್ಜಿಯ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸನತ್ ಕುಮಾರ್ ರೈ, ಅನಂತಾಡಿ ಗ್ರಾಮ ಬಿಜೆಪಿ ಸಮಿತಿ ಸಂತಾಪ ವ್ಯಕ್ತಪಡಿಸಿದೆ.

LEAVE A REPLY

Please enter your comment!
Please enter your name here