ಸುಬ್ರಹ್ಮಣ್ಯ: ಜೂನಿಯರ್ ರೆಡ್‌ಕ್ರಾಸ್ ಘಟಕ ಉದ್ಘಾಟನೆ

0

 

ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ವಿದ್ಯಾಲಯದ ಜೂನಿಯರ್ ರೆಡ್‌ಕ್ರಾಸ್ ಘಟಕದ ಉದ್ಘಾಟನೆ ಕಾರ್ಯಕ್ರಮ ಸೆ.19 ರಂದು ಕಾಲೇಜಿನ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.
ಯೇನೆಕಲ್ಲು ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನ್ನಪೂರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜೂನಿಯರ್ ರೆಡ್‌ಕ್ರಾಸ್ ಘಟಕದ ಪದಾಧಿಕಾರಿಗಳಾದ ಕಾರ್ಯದರ್ಶಿ ಶ್ರುತಿ ಅಶ್ವಥ್,
ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ ವಿ.ಭಟ್, ಶೋಭಾ ಗಿರಿಧರ್ ಹಾಗೂ ಅತಿಥಿಯಾಗಿ ಗೋಪಾಲ್ ಎಣ್ಣೆಮಜಲು, ಕಿಶೋರ್ ಕುಮಾರ್ ಕೂಜುಗೋಡು, ಉಪನ್ಯಾಸಕರುಗಳಾದ ಜಯಶ್ರೀ, ರೇಖಾರಾಣಿ, , ಗಿರೀಶ್, ಆಶಿಕ್ ಎಚ್., ಪಜ್ಞಾ ವೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here