ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

0

ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯದಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡಲಾಯಿತು.

ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ಮದ್ಯದಂಗಡಿ ತೆರೆಯದಂತೆ ಹಾಗೂ ತೆರೆದಲ್ಲಿ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗಿ ಊರಿನಲ್ಲಿ ಅಶಾಂತಿ ಸೃಷ್ಟಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ.
ಹೀಗಾಗಿ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಎಂದು ಗ್ರಾಮದ ನಾಗರಿಕ, ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಊರವರ ಪರವಾಗಿ, ಸಾರ್ವಜನಿಕ ಹಿತಾದೃಷ್ಟಿಯ ಕಾರಣದಿಂದ ದ.ಕ ಜಿಲ್ಲೆ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರನ್ನು ಸೆ.27ರಂದು ಅವರ ವಿಕಾಸ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಮದ್ಯದಂಗಡಿ ತೆರೆದಲ್ಲಿ ಆಗುವ ತೊಂದರೆಗಳ ಬಗ್ಗೆ ,ಹಾಗೂ ಗ್ರಾಮದಲ್ಲಿ ಈ ಹಿಂದೆ ನಡೆದ ಹೋರಾಟದ ಚಿತ್ರಣದ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಸೆ.29 ರಂದು ಗ್ರಾಮದಲ್ಲಿ ಹಮ್ಮಿಕೊಂಡ ಪ್ರತಿಭಟನೆ ರ್ಯಾಲಿ ಹಾಗೂ ಪ್ರತಿಭಟನೆಯ ಮುದ್ರಿತ ಕರಪತ್ರವನ್ನು ಸಚಿವರಿಗೆ ಮನವಿಯೊಂದಿಗೆ ನೀಡಿದ್ದಾರೆ.
ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಸಚಿವರಿಂದ ಭರವಸೆ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here