ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನಪರ ಉತ್ಸವ

0

 

ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಸೆ. 27ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ , ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವನ್ನು ಏರ್ಪಡಿಸಲಾಯಿತು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದರು.

ಡಾ. ದಿನೇಶ್ ಪಿ. ಟಿ. ಪ್ರಾಂಶುಪಾಲರು ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯ ಮುಖ್ಯ ಅತಿಥಿಗಳಾಗಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಶ ರಾಜೇಶ್ ಜಿ. ವಂದಿಸಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್. ಕಾರ್ಯಕ್ರಮ ಆಯೋಜಿಸಿದರು. ಉಪನ್ಯಾಸಕಿ ಆರತಿ ಕೆ ಕಾರ್ಯಕ್ರಮ ನಿರೂಪಿಸಿದರು.

ಬೈಯನಹಳ್ಳಿ, ಚೆನ್ನಗಿರಿ, ಭದ್ರಾವತಿ ಮೊದಲಾದ ಕಡೆಗಳಿಂದ ಕಲಾವಿದರು ಆಗಮಿಸಿ ಡೊಳ್ಳು ಕುಣಿತ, ಕಂಸಾಳೆ, ಲಂಬಾಣಿ ನೃತ್ಯ ಮೊದಲಾದ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು.

LEAVE A REPLY

Please enter your comment!
Please enter your name here