ದ.ಕ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕೃಷ್ಣಮೂರ್ತಿ ಹೆಚ್.ಕೆ

0

ಪುತ್ತೂರು: ಉತ್ತರ ಕನ್ನಡ ಜಿಲ್ಲೆ ಕಾರವಾರದಲ್ಲಿ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣಮೂರ್ತಿ ಹೆಚ್.ಕೆ ಅವರು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆ ಆದೇಶವಾಗಿದೆ.


ಪುತ್ತೂರಿನಲ್ಲಿ ಹಿರಿಯ ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ನ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿದ್ದರು. ಆ ಬಳಿಕ ಅವರು ಉತ್ತರ ಕನ್ನಡ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಪುತ್ತೂರಿನಲ್ಲಿ ಮೂರು ಬಾರಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದರು:
2006ರಲ್ಲಿ ಸೇವೆಗೆ ಸೇರ್ಪಡೆಗೊಂಡು ಬಳಿಕ ಶಿರಸಿ, ಹೊಸನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದ ಹೆಚ್.ಕೆ.ಕೃಷ್ಣಮೂರ್ತಿಯವರು 2014ರಲ್ಲಿ ಮೊದಲ ಬಾರಿ ಪುತ್ತೂರಿನಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ಬಳಿಕ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಮತ್ತೆ ಪುತ್ತೂರಿಗೆ ವರ್ಗಾವಣೆಗೊಂಡು ಎರಡನೇ ಬಾರಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ಅವಧಿಯಲ್ಲಿ ಅವರು ಸೇವಾ ಮುಂಭಡ್ತಿ ಹೊಂದುವ ಮೂಲಕ ಮೂರನೇ ಬಾರಿ ಅವರು ಪುತ್ತೂರಿನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಪುತ್ತೂರಿನಲ್ಲಿ ಸಹಾಯಕ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿ ಜನಪರ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಕೆಎಎಸ್ (ಹಿರಿಯ ಶ್ರೇಣಿ)ಅಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿಯವರು ಪುತ್ತೂರು ವಿಭಾಗದ ಹಿರಿಯ ಉಪವಿಭಾಗಾಧಿಕಾರಿಯಾಗಿದ್ದರು. ಬಳಿಕ ಅವರು ಉಪ ಚುನಾವಣಾಧಿಕಾರಿಯಾಗಿ ನೇಮಕಗೊಂಡು ಮಂಡ್ಯಕ್ಕೆ ವರ್ಗಾವಣೆಗೊಂಡಿದ್ದ ಹೆಚ್.ಕೆ.ಕೃಷ್ಣಮೂರ್ತಿ ಅವರು ಮಂಗಳೂರು ವಿದ್ಯುತ್ ಪ್ರಸರಣ ನಿಗಮ(ಮೆಸ್ಕಾಂ)ದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡು ಅಧಿಕಾರ ವಹಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here