6ನೇ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ಅಕ್ಷಯ ಕಾಲೇಜಿನ ಪ್ರಣಮ್ಯರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

0

ಪುತ್ತೂರು: ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ದ್ವಿತೀಯ ಬಿ.ಎಸ್ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ, ಯೋಗಸಾಧಕರಾದ ಚಂದ್ರಹಾಸ್ ಹಾಗೂ ಹೇಮಾ ಅಗಳಿರವರ ಪುತ್ರಿ ಪ್ರಣಮ್ಯ ಅಗಳಿ ಅವರು ಇತ್ತೀಚೆಗೆ ಪೋರ್ಟ್ ಬ್ಲೇಕ್‌, ಅಂಡಮಾನಿನಲ್ಲಿ ನಡೆದ 6ನೇ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಹಾಗೂ 2ನೇ ಅಂತರರಾಜ್ಯ ಆನ್ಲೈನ್ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ.

ಕಳೆದ ಬಾರಿ ಇವರು ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್ ಶಿಪ್ ನಲ್ಲಿ 30 ದೇಶಗಳೊಡನೆ ಸ್ಪರ್ಧಿಸಿ ಚಾಂಪಿಯನ್ ಆಗಿದ್ದು, ಕ್ರೀಡಾ ಭಾರತಿ ಮಂಗಳೂರು ಇದರಿಂದ ಜೀಜಾಬಾಯಿ ಪುರಸ್ಕಾರ ಪಡೆದಿರುತ್ತಾರೆ ಎಂದು ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲು, ಪ್ರಾಂಶುಪಾಲ ಸಂಪತ್ ಪಕ್ಕಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here