ಹಿರಿಯ ಪತ್ರಕರ್ತ ಬಿ.ಟಿ.ರಂಜನ್‌ರಿಗೆ ಸಾರ್ವಜನಿಕ ನುಡಿನಮನ

0

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಅವರಿಗೆ ಸಾರ್ವಜನಿಕ ನುಡಿ ನಮನವು ಫೆ.12ರಂದು ಇಲ್ಲಿನ ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಪುತ್ತೂರು ಪತ್ರಕರ್ತರ ಸಂಘದ ನೇತೃತ್ವದಲ್ಲಿ, ಪುತ್ತೂರು ನಗರಸಭೆ, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರದೊಂದಿಗೆ ನಡೆದ ನುಡಿನಮನದಲ್ಲಿ ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಬಿ.ಟಿ.ರಂಜನ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಇದರ ಮಾಜಿ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅವರು ನುಡಿನಮನ ಸಲ್ಲಿಸಿದರು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪುತ್ತೂರು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ, ನ್ಯಾಯವಾದಿ ಮಹೇಶ್ ಕಜೆ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ ಶೆಟ್ಟಿ ಕಾವು ಸೇರಿದಂತೆ ಹಲವಾರು ಮಂದಿ ನುಡಿನಮನ ಸಲ್ಲಿಸಿದರು. ಪತ್ರಕರ್ತ ಸಂಶುದ್ದೀನ್ ಸಂಪ್ಯ ಕಾರ್ಯಕ್ರಮ ನಿರೂಪಿಸಿದರು.

 

 

LEAVE A REPLY

Please enter your comment!
Please enter your name here