ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ

0

 

ನೂಜಿಬಾಳ್ತಿಲ: ಅಡೆಂಜ ಶ್ರೀ ಮಹಾಗಣಪತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟ ಬ್ರಹ್ಮಕಲಶೋತ್ಸವದಲ್ಲಿ ಫೆ.14ರಂದು ಬೆಳಗ್ಗೆ ನೆರವೇರಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈಧಿಕ, ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು.


ಸೋಮವಾರ ಬೆಳಗ್ಗೆ 5ರಿಂದ ಮಹಾಗಣಪತಿ ಹೋಮ ನಡೆಯಿತು. ಬಳಿಕ ಗಂಟೆ 8.33ರಿಂದ 9.16ರ ವರೆಗಿನ ಮೀನಲಗ್ನ ಶುಭಮುಹೂರ್ತದಲ್ಲಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಅಷ್ಟಬಂಧಕ್ರಿಯೆ, ಬ್ರಹ್ಮಕಲಶಾಭಿಷೇಕ ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿ, ಭಜನಾ ಮಂಡಳಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಕ್ಷೇತ್ರದ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here