ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕಾವು ಹೇಮನಾಥ್ ಶೆಟ್ಟಿ

0

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯತ್ವ ನೋಂದಣಿ ಕಾರ್ಯ ಭರದಿಂದ ನಡೆಯುತ್ತಿದೆ. ಇದು ಇನ್ನಷ್ಟು ವ್ಯವಸ್ಥಿತ ರೀತಿಯಲ್ಲಿ ನಡೆಯುವ ಉದ್ದೇಶದಿಂದ ರಾಜ್ಯಮಟ್ಟದ ನಾಯಕರಿಗೆ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗುತ್ತಿದೆ.

ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಕೆಪಿಸಿಸಿ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾವು ಹೇಮನಾಥ ಶೆಟ್ಟಿಯವರನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿಯ ಅಧ್ಯಕ್ಷರು ಜವಾಬ್ದಾರಿ ನೀಡಿದ್ದಾರೆ.
ಹೇಮನಾಥ ಶೆಟ್ಟಿಯವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಮಾರು 9 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅಲ್ಲದೆ, ಜಿಲ್ಲೆಯ, ರಾಜ್ಯದ ಹಲವು ಸ್ಥರದ ಜವಾಬ್ದಾರಿ ನಿರ್ವಹಿಸಿದ್ದಲ್ಲದೆ ಕೇರಳದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಇತ್ತೀಚೆಗಿನ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕೇರಳದ ಮೂವಾಟ್ಟುಪುಳ ವಿಧಾಸಭೆ ಮತ್ತು ಕರ್ನಾಟಕದ ಹಾನಗಲ್ ವಿಧಾನಸಭಾ ಚುನಾವಣೆಯಲ್ಲಿ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here