ನೂಜಿ ತರವಾಡು ಮನೆಗೆ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ, ಸನ್ಮಾನ

0

ಪುತ್ತೂರು: ಕೆಯ್ಯೂರು ಗ್ರಾಮದ ನೂಜಿ ತರವಾಡು ಮನೆಗೆ ಸಹಕಾರಿ ಸಚಿವ ಎಸ್.ಟಿ ಸೋಮಶೇಖರ್‌ರವರು ಭೇಟಿ ನೀಡಿದರು. ನೂಜಿ ತರವಾಡು ಮನೆಯ ಯಜಮಾನ ದಂಬೆಕ್ಕಾನ ಸದಾಶಿವ ರೈ ಮತ್ತು ಪ್ರಭಾ ಎಸ್.ರೈರವರು ಸಹಕಾರಿ ಸಚಿವ ಎಸ್.ಡಿ ಸೋಮಶೇಖರ್‌ರವರಿಗೆ ಶಾಲು ಹಾಕಿ, ದೇವರ ಫೋಟೋ ನೀಡಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು, ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು, ರಾಜ್ಯ ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಕಾಸಲೆ, ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ನಾಯಕ ಸಂತೋಷ್ ಕುಮಾರ್ ರೈ ಕೈಕಾರ, ಸಂತೋಷ್ ಗೌಡ ಉಪ್ಪಿನಂಗಡಿ ಮತ್ತಿತರರು ಉಪಸ್ಥಿತರಿದ್ದರು. ಅಕ್ಷಯ ರೈ ದಂಬೆಕ್ಕಾನ ಮತ್ತು ಐಕ್ಯ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here