ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ತೆಂಕಿಲದಲ್ಲಿರುವ ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನಡೆಯಿತು. ಪುತ್ತೂರಿನ ನಿರ್ಮಾಣ್ ಎಸೋಸಿಯೇಟ್ಸ್ ಮಾಲಕ ಸಚ್ಚಿದಾನಂದ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು. ಈ ಮೂಲಕ ಜೀವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು. ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ. ಉತ್ತಮ ವಿದ್ಯಾರ್ಥಿ ಉತ್ತಮ ನಾಗರಿಕನಾಗುತ್ತಾನೆ. ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ಶುಭಹಾರೈಸಿದರು. ಅಧ್ಯಕ್ಷತೆ ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಸೂರ್ಯನಾಥ ಆಳ್ವ ಮಾತನಾಡಿ ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ. ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ. ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ಎಂದು ಹೇಳಿದರು.


ಕಾಲೇಜಿನ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು ಮತ್ತು ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಕ್ರೀಡಾ ಮೈದಾನಕ್ಕೆ ಆಕರ್ಷಕವಾಗಿ ಹೊತ್ತು ಸಾಗಿ ಬಂದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ವಿಶೇಷ ಮೆರಗು ನೀಡಿತ್ತು.

ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ., ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಗೌಡ, ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ರೈ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಉಪನ್ಯಾಸಕಿ ರೇಣುಕಾ ವಂದಿಸಿದರು. ಮಧುರಾ ಕಾರ್ಯಕ್ರಮ ನಿರೂಪಿಸಿದರು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ದಾಮೋದರ, ಹರಿಣಾಕ್ಷಿ ಮತ್ತು ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕಿ ವಾಣಿಶ್ರೀ, ಕ್ರೀಡಾ ಸಮಿತಿಯ ಸಂಯೋಜಕ ಗಿರೀಶ್ ನರೇಂದ್ರ ಸಹಕರಿಸಿದರು. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here