ಬೆಳ್ಳಾರೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಿಂದ ಶರತ್ತು ಬದ್ಧ ಜಾಮೀನು ಮಂಜೂರು

0

ಪುತ್ತೂರು: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೋ ಕಾಯ್ದೆಯಡಿ ದಾಖಲಾದ ಪ್ರಕರಣದ ಆರೋಪಿಗೆ ಪುತ್ತೂರು 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜ.31ರಂದು ಪೆರಾಜೆ ಗ್ರಾಮದ ದೀಕ್ಷಿತ್ ಎಂಬವರು ಬೆಳ್ಳಾರೆ ಗ್ರಾಮದ ಪೆರುವಾಜೆ ಗ್ರಾಮದ ಅಪ್ರಾಪ್ತೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಾಲಕಿಯ ತಾಯಿಯ ದೂರಿನಂತೆ ಬೆಳ್ಳಾರೆ ಪೊಲೀಸರು ಆರೋಪಿ ವಿರದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ಮಧ್ಯೆ ಆರೋಪಿಯ ಬಿಡುಗಡೆಗಾಗಿ ಪುತ್ತೂರು 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಫಿರೇರಾ ಅವರು ಆರೋಪಿಗೆ ಶರತ್ತು ಬದ್ಧ ಜಾಮೀನು ಮಂಜೂರುಗೊಳಿಸಿದ್ದಾರೆ. ಆರೋಪಿಯ ಪರವಾಗಿ ಸುಳ್ಯದ ನ್ಯಾಯವಾದಿಗಳಾದ ಎಂ. ವೆಂಕಪ್ಪ ಗೌಡ,ಚಂಪ ವಿ ಗೌಡ ಹಾಗು ರಾಜೇಶ್ ಬಿ.ಜಿ ವಾದಿಸಿದರು.

LEAVE A REPLY

Please enter your comment!
Please enter your name here