ವಿಟ್ಲ : ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳು- ಹಾಜರಾಗಲು ಅನುಮತಿ ನೀಡದ ಪ್ರಾಂಶುಪಾಲರು

0

ವಿಟ್ಲ: ಹಿಜಾಬ್ ಧರಿಸಿಕೊಂಡು ತರಗತಿಗೆ ಬಂದ 11 ವಿದ್ಯಾರ್ಥಿಗಳಿಗೆ ಅವಕಾಶ ನೀಡದ ಕಾರಣ ವಿದ್ಯಾರ್ಥಿಗಳು ತಮ್ಮ ಮನೆಗೆ ತೆರಳಿದ ಘಟನೆ ವಿಟ್ಲ ಸ.ಪ್ರ.ದ.ಕಾಲೇಜಿನಲ್ಲಿ ನಡೆದಿದೆ.

ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಮುಂದಾಗಿದ್ದರು. ಆದರೆ ಪ್ರಾಂಶುಪಾಲರು ಹಿಜಾಬ್ ಧರಿಸಿ, ತರಗತಿ ಒಳಗಡೆ ಹೋಗಬಾರದು ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ. ಲೇಡಿಸ್ ಕೋಣೆಯಲ್ಲಿ ಕಳಚಿಟ್ಟು ಬಳಿಕ ತರಗತಿ ಹೋಗಬೇಕು ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳು ಹಿಜಾಬ್ ತೆಗೆಯಲು ನಿರಾಕರಿಸಿ ತಮ್ಮ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here