ಐವರ್ನಾಡಿನಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ

0

ಯುವಶಕ್ತಿಯಿಂದ ಸಮಾಜದ ಅಭಿವೃದ್ಧಿ – ನಿತ್ಯಾನಂದ ಮುಂಡೋಡಿ

ಐವರ್ನಾಡಿನಲ್ಲಿ ಹಲವು ವರ್ಷಗಳಿಂದ ಶಾರದೋತ್ಸವವು ನಡೆಯುತ್ತಿದೆ.
ಯುವಕರು ಒಗ್ಗಟ್ಟಿನಿಂದ ಬಹಳಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ.ಹಲವು ಜನರ ಕೊಡುಗೆಗಳಿಂದ ಇಲ್ಲಿ ಅಭಿವೃದ್ಧಿ ಕೆಲಸಗಳು ಆಗಿದೆ.


ಯುವಶಕ್ತಿಯಿಂದ ಸಮಾಜದ ಅಭಿವೃದ್ಧಿ ಆಗಿದೆ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.
ಅವರು ಐವರ್ನಾಡು ಯುವಶಕ್ತಿ ಸಂಘದ ವತಿಯಿಂದ ಸಾರ್ವಜನಿಕರ ಸಹಕಾರದೊಂದಿಗೆ ಐವರ್ನಾಡು ಸ.ಹಿ.ಪ್ರಾ.ಶಾಲಾ ಶ್ರೀ ಮಾತಾಜಿ ಸಭಾಭವನದ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ಅ.1ರಂದು ನಡೆದ ಶ್ರೀ ಶಾರದಾ ಪೂಜಾ ಮಹೋತ್ಸವದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡುತ್ತಿದ್ದರು.

p
ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ‌ ಸುಜಾತ ಪವಿತ್ರಮಜಲು ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ರಾಮಸ್ಥರಿಗೆ ನಡೆದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಯುವಶಕ್ತಿ ಸಂಘದ ಪ್ರಧಾನ ಕಾರ್ಯದರ್ಶಿ ಮುರಳೀಧರ ಕೊಚ್ವಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.
ರಾಷ್ಟ್ರೀಯ ಮಟ್ಟದ ಕಬಡ್ಡಿ‌ಆಟಗಾರ ಸಚಿನ್ ಪ್ರತಾಪ್ ರವರ ಪರವಾಗಿ ಅವರ ತಂದೆ ಸುಂದರಲಿಂಗಂ ರವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಪುತ್ತೂರು ರಾಮಕೃಷ್ಣ ಪ್ರೌಢ ಶಾಲೆ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ನ್ಯಾಯವಾದಿ ಎಂ.ವೆಂಕಪ್ಪ ಗೌಡ, ವೆಂಕಟ್ರಮಣ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಕೆ.ಟಿ, ಶಾಲಾ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದು ಮಾತನಾಡಿದರು.
*ಚಯರ್ ಕೊಡುಗೆ, ಧನಸಹಾಯ ಹಸ್ತಾಂತರ*

ಐವರ್ನಾಡು ಸ.ಹಿ.ಪ್ರಾ.ಶಾಲಾ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದ ಎದುರು ನೂತನವಾಗಿ ನಿರ್ಮಾ
ಣವಾದ ಶ್ರೀ ಮಾತಾಜಿ ಸಭಾಂಗಣಕ್ಕೆ ಸುಳ್ಯ ಎ.ಒ.ಎಲ್.ಇ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ರವರು 250 ಚಯರ್ ಗಳನ್ನು ಕೊಡುಗೆಯಾಗಿ ನೀಡಿದ್ದು ಇದನ್ನು ನಿತ್ಯಾನಂದ ಮುಂಡೋಡಿಯವರು ಶಾಲಾ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಯವರಿಗೆ ಹಸ್ತಾಂತರಿಸಿದರು.
ಇತ್ತೀಚೆಗೆ ಆಕಸ್ಮಿಕವಾಗಿ ನಿಧನರಾದ ದಯಾನಂದ ನಾಟಿಕೇರಿಯವರ ಮನೆಯವರಿಗೆ ಯುವಶಕ್ತಿ ಸಂಘದ ವತಿಯಿಂದ ರೂ.40,000 ಧನಸಹಾಯದ ಚೆಕ್ಕನ್ನು ಹಸ್ತಾಂತರಿಸಲಾಯಿತು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಯುವಶಕ್ತಿ ಸಂಘದ ಗೌರವಾಧ್ಯಕ್ಷ ದಿನೇಶ್ ಮಡ್ತಿಲ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ನವೀನ್ ಬಾಂಜಿಕೋಡಿ ಮತ್ತು ಜುನೈದ್ ನಿಡುಬೆ ಕಾರ್ಯಕ್ರಮ ನಿರೂಪಿಸಿ, ಯುವಶಕ್ತಿ ಸಂಘದ ಅಧ್ಯಕ್ಷ ಪ್ರಮೋದ್ ಮುಚ್ಚಿನಡ್ಕ ವಂದಿಸಿದರು.
ಸಭಾಕಾರ್ಯಕ್ರಮದ ಬಳಿಕ
ಶ್ರೀ ಶಾರದಾ ದೇವಿಗೆ ಮಹಾಪೂಜೆ,ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.
ಬಳಿಕ ಅಮೋಘ ಸಿಡಿಮದ್ದಿನ ಪ್ರದರ್ಶನ ನಡೆಯಿತು.
ಫ್ಯೂಷನ್ ಇನ್ಸಿಟ್ಯೂಟ್ ಆಫ್ ಡ್ಯಾನ್ಸ್ ತಂಡದಿಂದ “ಡ್ಯಾನ್ಸ್ ಡ್ಯಾನ್ಸ್” ನಡೆಯಿತು.
ಯುವಶಕ್ತಿ ಸಂಘದ ಸದಸ್ಯರಿಂದ “ಕಾರ್ಯಕ್ರಮ ವೈವಿಧ್ಯ”
ನಡೆಯಿತು.ಮಂಗಳೂರು ಲಕುಮಿ ತಂಡದ ತುಳು
ನಾಟಕ “ಲೇಲೆ ಪಾಡಡೆ ! ” ನಡೆಯಿತು.
ಅ.01 ರಂದು ಬೆಳಿಗ್ಗೆ ಗಣಹೋಮ, ಶ್ರೀ ಶರದಾ ದೇವಿಯ ಪ್ರತಿಷ್ಠಾಪನೆ ನಡೆಯಿತು.
ಗ್ರಾಮಸ್ಥರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.
ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.ಸಂಜೆ ಪ್ರಾಥಮಿಕ ಶಾಲಾ ಮಕ್ಕಳ ಹಾಗೂ ಅಂಗನವಾಡಿ ಮಕ್ಕಳ ಡ್ಯಾನ್ಸ್ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here