ಅ.09 ; ಬೆಳ್ಳಾರೆಯಲ್ಲಿ 168ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ,ಗುರುಪೂಜೆ,ಪ್ರತಿಭಾ ಪುರಸ್ಕಾರ ,ಸನ್ಮಾನ

0

 

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಸುಳ್ಯ, ಯುವವಾಹಿನಿ ಸುಳ್ಯ ಘಟಕ ಮತ್ತು ಬಿರುವೆರ್ ಕುಡ್ಲ ಸುಳ್ಯ ಘಟಕ ಹಾಗೂ ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಆಶ್ರಯದಲ್ಲ 168 ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ,ಗುರುಪೂಜೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವು ಅ.09 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪುರೋಹಿತರಾದ ಪಿ.ಡಿ.ಹರೀಶ ಶಾಂತಿ ಪುತ್ತೂರು ಇವರ ನೇತೃತ್ವದಲ್ಲಿ ಗುರುಪೂಜೆ ನಡೆಯಲಿದೆ.


ಬೆಳಿಗ್ಗೆ ಗಂಟೆ 8.30 ರಿಂದ ಸುರೇಶ್ ಪೂಜಾರಿ ಪೆರುವಾಜೆ ಮತ್ತು ತಂಡದಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
10.30ರಿಂದ ಗುರುಪೂಜೆ,ಸಭಾಕಾರ್ಯಕ್ರಮ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಬ್ರಹ್ಮಶ್ರೀ ಬಿಲ್ಲವ ಸಂಘದ ಅಧ್ಯಕ್ಷ ಎನ್.ಎಸ್.ಡಿ.ವಿಠಲದಾಸ್ ವಹಿಸಲಿದ್ದಾರೆ.
ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.ಈ ಸಂದರ್ಭದಲ್ಲಿ ಹಲವು ಜನ ಅತಿಥಿಗಳು ವೇದಿಕೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here