ಜಿಡೆಕಲ್ಲು ಸ.ಪ್ರ.ದ.ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ಮೂವರು ವಿದ್ಯಾರ್ಥಿನಿಯರು – ಕಾಲೇಜಿಗೆ ರಜೆ ಘೋಷಣೆ

0

ಪುತ್ತೂರು: ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ತರಗತಿ ಪ್ರವೇಶ ನೀರಾಕರಿಸಿದ್ದು ಬಳಿಕದ ಬೆಳವಣಿಗೆಯಲ್ಲಿ ಕಾಲೇಜಿಗೆ ರಜೆ ಘೋಷಣೆ ಮಾಡಿದ ಘಟನೆ ಫೆ.18ರಂದು ನಡೆದಿದೆ.

ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಐವರು ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ತರಗತಿಗೆ ಆಗಮಿಸಿದ್ದು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ನಿರಾಕರಿಸಿದ್ದಾರೆ. ಇದಕ್ಕೆ ಕೆಲವು ವಿದ್ಯಾರ್ಥಿಗಳು ಅವರಿಗೆ ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ನೀಡಬೇಕೆಂದು ಕಾಲೇಜು ಆಡಳಿತ ಮಂಡಳಿಯೊಂದಿಗೆ ಕೇಳಿಕೊಂಡಿದ್ದು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ. ಬಳಿಕ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು ಬಳಿಕ ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here