ಮುಂಡೂರಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ

0

  •  ಸಹಾಯಕ ಆಯುಕ್ತರಿಂದ ಉದ್ಘಾಟನೆ
  •  ಗ್ರಾಮಸ್ಥರಿಂದ ಅಹವಾಲು ಸ್ವೀಕಾರ

ಪುತ್ತೂರು: ತಾಲೂಕಿನ ಮುಂಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ19ರಂದು  ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉದ್ಘಾಟನೆಗೊಂಡಿತು.

ಸಹಾಯಕ ಆಯುಕ್ತ ಗಿರೀಶ್ ನಂದನ್ ಉದ್ಘಾಟಿಸಿ, ನಾಗರಿಕರಿಂದ ಅಹವಾಲು ಸ್ವೀಕರಿಸಿದರು. ತಾಪಂ ಇಓ ನವೀನ್ ಭಂಡಾರಿ, ತಹಶೀಲ್ದಾರ್ ರಮೇಶ್ ಬಾಬು, ಗ್ರಾಪಂ ಅಧ್ಯಕ್ಷೆ ಪುಷ್ಪಾ, ಉಪತಹಶೀಲ್ದಾರ್ ಲೊಕೇಶ್, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಇದೇ ಸಂದರ್ಭ ಮಾಸಾಶನ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು‌. ಇಲಾಖೆ ಅಧಿಕಾರಿಗಳು ಸರಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

 

ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ, ಪಶುಸಂಗೋಪನಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮೆಸ್ಕಾಂ, ಕೃಷಿ ಇಲಾಖೆ, ಅಗ್ನಿಶಾಮಕ, ಸಾಮಾಜಿಕ ಅರಣ್ಯ ವಲಯ, ಕೆಎಸ್ ಆರ್ ಟಿಸಿ, ಸರ್ವೆ, ವಲಯ ಅರಣ್ಯಾಧಿಕಾರಿ, ಲೋಕೋಪಯೋಗಿ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ, ಗ್ರಾಮ ಕರಣಿಕರು ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಂಡರು.

 

LEAVE A REPLY

Please enter your comment!
Please enter your name here