ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ

0

ಪುತ್ತೂರು:ದ.ಕ.ಜಿಲ್ಲಾಡಳಿತ ಮತ್ತು ದ.ಕ.ಜಿಲ್ಲಾಪಂಚಾಯತ್ ವತಿಯಿಂದ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ಬಗ್ಗೆ ಮತ್ತು ಜನರ ಕುಂದುಕೊರತೆಗಳಿಗೆ ಹಾಗೂ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುವ ದೇಶವನ್ನು ಇಟ್ಟುಕೊಂಡು ಬಾಕಿ ಇರುವ ಹಳೆಯ ಕಡತಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಫೆ.19ರಿಂದ ಫೆ.28ರ ತನಕ ನಡೆಯಲಿರುವ `ಕಡತ ವಿಲೇವಾರಿ ಸಪ್ತಾಹ’ವು ಫೆ.19ರಂದು ಉದ್ಘಾಟನೆಗೊಂಡಿತು.
ತಾಲೂಕು ಆಡಳಿತ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಡತ ವಿಲೇವಾರಿ ಸಪ್ತಾಹವನ್ನು ದೀಪ ಬೆಳಗಿಸಿ ಉದ್ಘಾಟಿಸಿದ, ಸಹಾಯಕ ಆಯುಕ್ತ ಗಿರೀಶ್ ನಂದನ್ ಎಂ. ಮಾತನಾಡಿ, ಕಡತ ವಿಲೇವಾರಿಯ ಬಗ್ಗೆ ವಿವರಿಸಿದ ಅವರು ತಾಲೂಕಿನಲ್ಲಿ ಕಡತ ವಿಲೇವಾರಿ ಸಪ್ತಾಹವನ್ನು ಯಶಸ್ವಿಗೊಳಿಸುವಂತೆ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ತಹಶೀಲ್ದಾರ್ ಟಿ.ರಮೇಶ್ ಬಾಬು, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಕಚೇರಿಯ ಪ್ರ.ದ.ಸ ಡಿ.ಟಿ.ದಯಾನಂದ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬಂದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here