ಕಾನತ್ತಡ್ಕ: ವ್ಯಕ್ತಿ ನಾಪತ್ತೆ – ಪ್ರಕರಣ ದಾಖಲು

0

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕಾನತ್ತಡ್ಕ ನಿವಾಸಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಕಾನತ್ತಡ್ಕ ನಿವಾಸಿ ನಾಗೇಶ್ ಗೌಡ ಕೆ.(65 ವ.)ರವರು ನಾಪತ್ತೆಯಾದವರಾಗಿದ್ದಾರೆ. ಜ.೩೧ರಂದು ಮನೆಯಲ್ಲಿ ಅಸಮದಾನಗೊಂಡಿದ್ದ ಅವರು  ಫೆ.1ರಂದು ಬೆಳಗ್ಗಿನಿಂದ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಸಂಬಂಧಿಕರ ಮನೆ ಸಹಿತ ವಿವಿದೆಡೆ ಹುಡುಕಾಟ ನಡೆಸಿದರು ಪತ್ತೆಯಾಗದ ಹಿನ್ನೆಲೆಯಲ್ಲಿ ಫೆ.19ರಂದು ಅವರ ಪತ್ನಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿ ಯನ್ನು ಯಾರಾದರು ಕಂಡಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರ ಪ್ರಕಟಣೆ ತಿಳಿಸಿದೆ

LEAVE A REPLY

Please enter your comment!
Please enter your name here