ಅಮರ ಸಂಘಟನಾ ವತಿಯಿಂದ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ

0

 

 

ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಗಾಂಧಿಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯನ್ನು ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆರಕ್ಷಕ ಠಾಣೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಬೆಳ್ಳಾರೆ ಆರಕ್ಷಕ ಠಾಣೆಯ ವೃತ್ತನಿರೀಕ್ಷರಾದ ಸುಹಾಸ್ ರವರು ಅಮರ ಸಂಘಟನೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here