ವಿಟ್ಲ ತಾಲೂಕು ರಚನಾ ಸಮಿತಿ ಪದಾಧಿಕಾರಿಗಳಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಗೆ ಮನವಿ ಸಲ್ಲಿಕೆ

0

 


ವಿಟ್ಲ:  ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ  ವಿಧಾನಸೌಧದಲ್ಲಿರುವ  ಕಚೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರನ್ನು ಭೇಟಿಯಾಗಿ ವಿಟ್ಲ ತಾಲೂಕು ರಚನೆಯ ಬಗ್ಗೆ ಮನವಿ ಸಲ್ಲಿಸಿದರು. ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ಬೇಕಾದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ರಚನಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಸಂಘಟನಾ ಕಾರ್ಯದರ್ಶಿಗಳಾದ ವಿಶ್ವನಾಥ ಎಂ ವೀರಕಂಭ, ಉದಯ ಕುಮಾರ್ ಆಲಂಗಾರು, ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಮೊದಲಾದವರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here