ದೇಶದ್ರೋಹಿ ಹೇಳಿಕೆ ನೀಡಿದ ಸಚಿವ ಈಶ್ವರಪ್ಪರನ್ನು ವಜಾಗೊಳಿಸಿ: ಕಾಂಗ್ರೆಸ್‌ನಿಂದ ರಾಜ್ಯಪಾಲರಿಗೆ ಮನವಿ

0

ಪುತ್ತೂರು; ಕರ್ನಾಟಕ ರಾಜ್ಯದ ಸಚಿವರಾಗಿರುವ ಕೆ ಎಸ್ ಈಶ್ವರಪ್ಪನವರು ಇತ್ತೀಚೆಗೆ ಹೇಳಿಕೆ ನೀಡಿ ತ್ರಿವರ್ಣ ದ್ವಜದ ಸ್ಥಾನದಲ್ಲಿ ಕೇಸರಿ ದವಜ ಹಾರಿಸುವುದಾಗಿ ಹೇಳಿಕೆ ನೀಡಿದ್ದಾರೆ ಇದು ಅತ್ಯಂತ ಅಪಾಯಕಾರಿ ದೇಶದ್ರೋಹಿ ಹೇಳಿಕೆಯಾಗಿರುತ್ತದೆ. ತ್ರಿವರ್ಣ ದ್ವಜವು ದೇಶದ ಸ್ವಾತಂತ್ರ್ಯ, ಅಖಂಡತೆ, ಸ್ಮಿತೆ, ಸಾರ್ವಭೌಮತೆ ಮತ್ತು ಸಂವಿಧಾನಗಳ ಸಂಕೇತವಾಗಿದೆ. ಇಂಥಹ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಅಗ್ರಹಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪುತ್ತೂರು೮ ತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.


ದೇಶದ್ರೋಹದ ಹೇಳಿಕೆ ನೀಡಿರುವ ಸಚಿವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಮತ್ತು ವಜಾಗೊಳಿಸುವಂತೆ ಆಗ್ರಹಿಸಿ ವಿಧಾನ ಸೌಧದಲ್ಲಿ ಆಹೋರಾತ್ರಿ ಧರಣಿ ನಡೆಯುತ್ತಿದೆ. ದೇಶದ್ರೋಹದ ಹೇಳಿಕೆಯನ್ನು ರಾಷ್ಟ್ರಾಭಿಮಾನಿಗಳು ಯಾವ ಕಾರಣಕ್ಕೂ ಸಹಿಸುವುದಿಲ್ಲ. ದೇಶದ ತ್ರಿವರ್ಣ ದ್ವಜ, ರಾಷ್ಟ್ರ ಲಾಂಛನ ವನ್ನು ಅವಹೇಳನ ಮಾಡುವುದನ್ನು ದೇಶ ವಾಸಿಗಳು ಸಹಿಸಲು ಸಾಧ್ಯವಿಲ್ಲ. ಸಚಿವ ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸುವಂತೆ ರಾಜ್ಯಪಾಲರಿಗೆ ನೀಡಿದ ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ ಶೆಟ್ಟಿ , ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ ಬಿ. ವಿಶ್ವನಾತ್ ರೈ ,ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ,ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶಕೂರು ಹಾಜಿ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಅಮಲ ರಾಮಚಂದ್ರ, ಕಾರ್ಯದರ್ಶಿ ರೋಷನ್ ರೈ ಬನ್ನೂರು,ಕಾರ್ಮಿಕ ಘಟಕದ ಅಧ್ಯಕ್ಷ ಶರೊನ್ ಸಿಕ್ವೆರಾ, ನಗರ ಸಭಾ ಸದಸ್ಯ ರಿಯಾಜ್ ಪರ್ಲಡ್ಕ, ಪಂಚಾಯತ್ ರಾಜ್ ಸಂಘಟಣೆಯ ಸಂತೋಷ್ ಭಂಡಾರಿ ಚಿಲ್ಮೆತ್ತಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವಿಜಯಲಕ್ಷ್ಮಿ ಕೆ, ಮಾಜಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಬ್ಲಾಕ್ ಮಹಿಳಾ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಸೀತಾ ಉದಯ ಶಂಕರ್ ಭಟ್,ಪಂಚಾಯತ್ ಸದಸ್ಯ ಇಬ್ರಾಹಿಂ ಮೈರೋಳ್, ಇಸ್ಮಾಯಿಲ್ ಘಟ್ಟಮನೆ, ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹೇಶ್ ಕಲ್ಲೇಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here