ಮುಂದಿನ ಚುನಾವಣೆಗೆ ಬಿಜೆಪಿ ಪೂರ್ಣ ಪ್ರಮಾಣದ ಸಿದ್ಧತೆ

0

  • ಕೇಂದ್ರ ಸರಕಾರದ ಆತ್ಮನಿರ್ಭರ ಬಜೆಟ್ ಕುರಿತು  ಸಂವಾದ ಉದ್ಘಾಟನೆಯಲ್ಲಿ  ಕೆ.ಜೀವಂದರ್ ಜೈನ್

 

ಪುತ್ತೂರು: ಕೇಂದ್ರ ಸರಕಾರದ ಆತ್ಮನಿರ್ಭರ ಬಜೆಟ್ ಕುರಿತು ಬಿಜೆಪಿ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ವತಿಯಿಂದ ಬಿಜೆಪಿ ಅಪೇಕ್ಷಿತರಿಗೆ ಸಂವಾದ ಕಾರ್ಯಕ್ರಮ ಫೆ.22ರಂದು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.


ಆರ್ಥಿಕ ತಜ್ಞ ಸಿ.ಎ ನರಸಿಂಹದಾಸ್ ಪೈ ಅವರು ಪವರ್ ಪಾಯಿಂಟ್ ಮೂಲಕ ಬಜೆಟ್ ಕುರಿತ ಮಾಹಿತಿ ಮತ್ತು ಸಂವಾದ ನಡೆಸಿದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಎಲ್ಲಾ ಜನತೆಗೆ ಪ್ರಯೋಜವಾಗುವಂತಹ ಉಪಯುಕ್ತ ಬಜೆಟ್ ನೀಡಿದ್ದಾರೆ. ಅದರಲ್ಲೂ ಸ್ವಾಭಿಮಾನಕ್ಕೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಉದಾಹರಣೆ ಎಂಬಂತೆ ಬೀದಿ ಬದಿ ವಾಪಾರಿಗಳು ಸ್ವಾವಲಂಭಿಗಳಾಗಬೇಕೆಂದು ಅವರನ್ನು ಪ್ರೋತ್ಸಾಹಿಸಲು ಬ್ಯಾಂಕ್‌ಗಳ ಮೂಲಕ ರೂ. 10೦ಸಾವಿರ ಸಾಲ ಸೌಲಭ್ಯ ನೀಡಲಾಗಿದೆ. ಒಟ್ಟಿನಲ್ಲಿ ಮುಂದಿನ ಚುನಾವಣೆ ಸಂದರ್ಭ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಕೇಂದ್ರದ ಬಜೆಟ್ ಪ್ರಯೋಜನಗಳ ಮಾಹಿತಿಯನ್ನು ಜನರಿಗೆ ತಿಳಿಸುವ ಕೆಲಸ ನಮ್ಮಿಂದಾಗಬೇಕು. ಈ ನಿಟ್ಟಿನಲ್ಲಿ ಬಜೆಟ್ ಕುರಿತು ಮಾಹಿತಿಯನ್ನು ಮುಂಚಿತವಾಗಿ ನಾವು ಅರ್ಥ ಮಾಡಿಕೊಳ್ಳಬೇಕೆಂದು ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ನಾವೆಲ್ಲ ಅದನ್ನು ತಿಳಿದು ಕೊಂಡು ಜನರಿಗೆ ತಿಳಿಸುವ ಕೆಲಸ ಮಾಡೋಣ ಎಂದರು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ವಿಭಾಗದ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭಾಸ್ಕರ್ ರೈ ಕಂಟ್ರಮಜಲು ಅತಿಥಿಯನ್ನು ಗೌರವಿಸಿದರು. ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ಗೌರಿ ಬನ್ನೂರು ಪ್ರಾರ್ಥಿಸಿದರು. ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here