ಬೆಟ್ಟಂಪಾಡಿ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ಸಾಮೂಹಿಕ ಆಶ್ಲೇಷ ಬಲಿ ಸೇವೆ

0

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ 9 ನೇ ವರ್ಷದ ಪ್ರತಿಷ್ಠಾ ಮಹೋತ್ಸವ, ನಾಗದೇವರ ಪ್ರೀತ್ಯರ್ಥವಾಗಿ ಸಾಮೂಹಿಕ ಆಶ್ಲೇಷ ಬಲಿ ಸೇವೆಯು ಕ್ಷೇತ್ರದ ತಂತ್ರಿಗಳಾದ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಫೆ. 22 ರಂದು ನಡೆಯಿತು.

ಬೆಳಿಗ್ಗೆ ದ್ವಾದಶ ನಾರಿಕೇಳ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ದೇವರಿಗೆ, ಪರಿವಾರ ದೇವರಿಗೆ, ದೈವಗಳಿಗೆ ಹಾಗೂ ನಾಗದೇವರಿಗೆ ಕಲಶಾಭಿಷೇಕ ನಡೆದು ಬಳಿಕ ಸಾಮೂಹಿಕ ಆಶ್ಲೇಷ ಬಲಿ ಸೇವೆ ನಡೆದುಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸ ವಿನೋದ್ ರೈ ಗುತ್ತು, ಆಡಳಿತ ಮಂಡಳಿ, ಅಭಿವೃದ್ಧಿ ಸಮಿತಿಯವರು, ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here