ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಕೆದಂಬಾಡಿ ಗ್ರಾಪಂ ಬಿಜೆಪಿ ಬೆಂಬಲಿತ ಸದಸ್ಯರ 1 ತಿಂಗಳ ಗೌರವಧನ-ಘೋಷಣೆ

0

ಪುತ್ತೂರು: ಶಿವಮೊಗ್ಗದಲ್ಲಿ ಕೊಲೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷರವರ ಕುಟುಂಬಕ್ಕೆ ಕೆದಂಬಾಡಿ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯರು ತಮ್ಮ 1 ತಿಂಗಳ ಗೌರವಧನವನ್ನು ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯರುಗಳಾದ ಗ್ರಾಪಂ ಅಧ್ಯಕ್ಷ ರತನ್ ರೈ ಕುಂಬ್ರ, ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ, ಸದಸ್ಯರುಗಳಾದ ವಿಠಲ ರೈ ಮಿತ್ತೋಡಿ, ಕೃಷ್ಣ ಕುಮಾರ್ ಇದ್ಯಪೆ, ಜಯಲಕ್ಷ್ಮೀ ಬಲ್ಲಾಳ್, ಸುಜಾತ ಮುಳಿಗದ್ದೆ, ರೇವತಿ ಬೋಳೋಡಿರವರುಗಳ ತಮ್ಮ 1 ತಿಂಗಳ ಗೌರವಧನ ಒಟ್ಟು ರೂ.10 ಸಾವಿರವನ್ನು ಮೃತ ಹರ್ಷರವರ ಕುಟುಂಬಕ್ಕೆ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಹಣವನ್ನು ಹರ್ಷರವರ ಕುಟುಂಬದ ಅಕೌಂಟ್‌ಗೆ ಪಾವತಿಸುವುದಾಗಿ ಅಧ್ಯಕ್ಷ ರತನ್ ರೈ ಕುಂಬ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here