ಹರ್ಷ ಕುಟುಂಬಕ್ಕೆ ಒಂದು ತಿಂಗಳ ವೇತನವನ್ನು ಪರಿಹಾರವಾಗಿ ನೀಡಿದ ಶಾಸಕ ಸಂಜೀವ ಮಠಂದೂರು 

0

  • ಶಾಸಕರ ಜೊತೆ ನಗರಸಭೆ ಅಧ್ಯಕ್ಷ, ಪುಡಾ ಅಧ್ಯಕ್ಷರಿಂದ ಒಂದು ತಿಂಗಳ ವೇತನ ಪರಿಹಾರ

 

ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಪರಿವಾರದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಒಂದು ತಿಂಗಳ ಗೌರವ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಕೂಡಾ ತಮ್ಮ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಪುತ್ತೂರಿನಲ್ಲಿ ಅವರು ಪತ್ರಿಕಾ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮೃತ ಹರ್ಷ ಬಜರಂಗದಳದ ಕಾರ್ಯಕರ್ತರಾಗಿದ್ದಾರೆ. ರಾಜ್ಯದಲ್ಲಿ ಇವತ್ತು ಒಂದಷ್ಟು ಮುಸ್ಲಿಂ ಮತಾಂದ ವ್ಯಕ್ತಿಗಳು ಸರಕಾರಕ್ಕೆ ಕೆಟ್ಟ ಹೆಸರು ಮತ್ತು ಮತೀಯವಾಗಿ ಸಂಘರ್ಷ ತರುವ ಉದ್ದೇಶದಿಂದ ಹಿಂದು ಕಾರ್ಯಕರ್ತರ ಕೊಲೆಯನ್ನು ಮಾಡುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇನೆ. ಮತಾಂದ ವ್ಯಕ್ತಿಗಳನ್ನು ಮುಂದಿನ ದಿನಗಳಲ್ಲಿ ಜೈಲಿಗೆ ಹಾಕುವ ಕೆಲಸವನ್ನು ನಮ್ಮ ಗೃಹ ಮಂತ್ರಿ ಅರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ ನೀಡಿದ್ದಾರೆ. ಅದರ ಜೊತೆಗೆ ಒಟ್ಟು ಘಟನೆಯ ಹಿಂದೆ ಯಾರ್‍ಯಾರ ಕೈವಾಡ ಇದೆ ಎಂದು ಎನ್.ಐ. ತನಿಖೆ ಮಾಡಲು ಒತ್ತಾಯ ಮಾಡುತ್ತಿದ್ದೇವೆ. ಅದರ ಜೊತೆಗೆ ಹರ್ಷನಂತಹ ಯುವಕರು ಬಲಿದಾನ ಆಗಿದ್ದಾರೋ ಅಂತವರ ಕುಟುಂಬಕ್ಕೆ ನಾನು ಸೇರಿದಂತೆ ನಮ್ಮೆಲ್ಲ ಶಾಸಕರು ಸೇರಿ ಕೊಂಡು ಒಂದು ತಿಂಗಳ ವೇತನವನ್ನು ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

 

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಹರಿಪ್ರಸಾದ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಗೆ ಸೂಚನೆ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಘಟನೆಗಳಾಗದಂತೆ ಪೊಲೀಸ್ ಇಲಾಖೆ ಮುಂಜಾಗ್ರತೆ ಕ್ರಮ ಕೈಗೊಳ್ಳುಲು ಸೂಚನೆ ನೀಡಲಾಗಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದ ಮೂಲಕ ಬೇರೆ ಬೇರೆ ರೀತಿಯಾಗಿ ಕಾರ್ಯಕರ್ತರಿಗೆ ಕೊಲೆ ಬೆದರಿಕೆ ಬಂದಿರುವ ಮಾಹಿತಿ ಇದೆ. ಈ ಕುರಿತು ಪೊಲೀಸರು ಕಾರ್ಯಪ್ರವೃತರಾಗಿ ಅವರನ್ನು ತಕ್ಷಣ ಬಂದಿಸಿ, ಅಂತಹ ಸಂಘಟನೆಗಳಪ್ರಮುಖರನ್ನು ಠಾಣೆಗೆ ಕರೆದು ಮುಚ್ಚಲಿಕೆ ಬರೆಸಿ ಅವರ ನಡವಳಿಕೆಯಲ್ಲಿ ಗಮನಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

LEAVE A REPLY

Please enter your comment!
Please enter your name here