ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಉತ್ಸವ

0

 

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಸೆ.26 ರಿಂದ ಪ್ರಾರಂಭಗೊಂಡು ಅ.04 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಪ್ರತೀ ದಿನ ಬೆಳಿಗ್ಗೆ ,ಮಧ್ಯಾಹ್ನ ಮತ್ತು ರಾತ್ರಿ ಶ್ರೀ ದೇವರಿಗೆ ಮಹಾಪೂಜೆ ನಡೆಯಿತು.
ದುರ್ಗಾದೇವಿ ಸನ್ನಿಧಿಯಲ್ಲಿ ದುರ್ಗಾಪೂಜೆ ನಡೆಯಿತು.
ಗೆಳೆಯರ ಬಳಗ ದೇರಾಜೆ ಮತ್ತು ಶ್ರೀ ಗುರುದೇವ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ಪ್ರತೀ ದಿನ ನಡೆಯಿತು.
ಅ.04 ರಂದು ಆಯುಧ ಪೂಜೆ ನಡೆಯಿತು.
ಅ.05 ವಿಜಯ ದಶಮಿ ದಿನದಂದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು.
ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ ,ಅನ್ನಸಂತರ್ಪಣೆ ನಡೆಯಿತು.
ದೇವಸ್ಥಾನದ ಅರ್ಚಕ ಪದ್ಮನಾಭ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮಡ್ತಿಲ ಮತ್ತು ಸದಸ್ಯರು ಹಾಗೂ ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here