ಮಾ.2: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮಿಲನ, ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ

0

ನೆಲ್ಯಾಡಿ: ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮಿಲನ-2022 ಮತ್ತು ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಅಭಿನಂದನಾ ಕಾರ್ಯಕ್ರಮ ಮಾ.2ರಂದು ಅಪರಾಹ್ನ 2 ರಿಂದ 4ರ ತನಕ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ತಿಳಿಸಿದ್ದಾರೆ.

 


ಸಂಸ್ಥೆಯ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿರುವ ವೆ|ರೆ| ಜಾನ್ ವರ್ಗೀಸ್ ಕೋರ್ ಎಪಿಸ್ಕೋಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ., ನಿವೃತ್ತ ಮುಖ್ಯಗುರು, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಅಧ್ಯಕ್ಷ ಚಂದ್ರಶೇಖರ ಪೆರಾಲ್, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷೆ ಚೇತನಾ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ಇಸ್ಮಾಯಿಲ್‌ರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಪದ್ಮಶ್ರೀ ಹಾಜಬ್ಬರಿಗೆ ಹಾರಾರ್ಪಣೆ ಮಾಡಲಿಚ್ಛಿಸುವ ಸಂಘ ಸಂಸ್ಥೆಯವರಿಗೆ ಹಾಗೂ ಸಾರ್ವಜನಿಕರಿಗೆ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here