ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ, ನೇಮೋತ್ಸವ – ಧಾರ್ಮಿಕ ಸಭೆ

0

  • ಕಷ್ಟದ ಕಾಲದಲ್ಲಿ ಕೊರಗಜ್ಜ ದೈವವನ್ನು ನೆನಪಿಸಿಕೊಂಡಾಗ ಕೊರಗಜ್ಜನ ಅಭಯ- ಸತೀಶ್ ಕುಮಾರ್ ಕೆಡೆಂಜಿ
  • ಎಲ್ಲರ ಸಂಕಲ್ಪದಂತೆ ಕ್ಷೇತ್ರವು ಹಂತ ಹಂತವಾಗಿ ಅಭಿವೃದ್ಧಿ- ಉಮೇಶ್ ಕೆ.ಎನ್ ಕಾರ್ಲಾಡಿ
  • ಪುಣ್ಯ ಕ್ಷೇತ್ರವಾಗಿ ಅಭಿವೃದ್ಧಿಗೊಳ್ಳುತ್ತಿದೆ – ಲೋಹಿತಾಕ್ಷ ಕೆಡೆಂಜಿಕಟ್ಟ
  •  ಭಕ್ತರ ಅವಿರತ ಶ್ರಮದಿಂದ ಕ್ಷೇತ್ರದ ಅಭಿವೃದ್ಧಿ- ರಮೇಶ್ ಕೆ.ಎನ್ ಕಾರ್ಲಾಡಿ

ಕಾಣಿಯೂರು: ಕಷ್ಟದ ಕಾಲದಲ್ಲಿ ಕೊರಗಜ್ಜ ದೈವವನ್ನು ನೆನಪಿಸಿಕೊಂಡಾಗ ಕೊರಗಜ್ಜನ ಅಭಯ ಖಂಡಿತ ಇದೆ. ತನ್ನ ಬೇಡಿಕೆಯನ್ನು ಈಡೇರಿಸಿದ ಹಲವಾರು ಉದಾಹರಣೆಗಳು ಕಣ್ಣ ಮುಂದೆ ತೆರದುಕೊಳ್ಳುತ್ತದೆ. ಇದು ಕೊರಗಜ್ಜ ದೈವದ ಕಾರಣಿಕದ ವಿಶೇಷತೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ಹೇಳಿದರು. ಅವರು ಫೆ.25ರಂದು ಕುದ್ಮಾರು ಗ್ರಾಮದ ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನ ಬೇರಿಕೆ ,ಆದಿಮುಗೇರ್ಕಳ ದೈವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.ಕಷ್ಟದ ಕಾಲಘಟ್ಟದಲ್ಲಿಯೂ ವ್ಯವಸ್ಥಿತ ರೀತಿಯಲ್ಲಿ ಈ ಕ್ಷೇತ್ರದಲ್ಲಿ ನೇಮೋತ್ಸವಗಳು ನಡೆಯುತ್ತಿದ್ದವು. ಬದಲಾದ ಸಂದರ್ಭದಲ್ಲಿ ಸಾನಿಧ್ಯವು ಅಭಿವೃದ್ಧಿಗೊಂಡು ಜನತೆಯ ಸಹಕಾರದಿಂದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಿತು. ಎಲ್ಲಿ ಕೊರಗಜ್ಜನ ಸಾನಿಧ್ಯವಿದೆಯೂ ಅಲ್ಲಿ ನಿತ್ಯ ನಿರಂತರ ನೇಮೋತ್ಸವ, ವಿವಿದ ಸೇವೆಗಳು ನಡೆದುಕೊಂಡು ಬರುತ್ತಿದೆ ಎಂದರು.

ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಕೆ.ಎನ್ ಕಾರ್ಲಾಡಿ ಮಾತನಾಡಿ, ಶಿಥಿಲಗೊಂಡಿರುವ ಈ ಕ್ಷೇತ್ರವನ್ನು ಜೀರ್ಣೋದ್ಧಾರ ಮಾಡಬೇಕೆನ್ನುವ ಇಚ್ಛೆ ಎಲ್ಲರಲ್ಲಿಯೂ ಇತ್ತು. ಎಲ್ಲರ ಸಂಕಲ್ಪದಂತೆ ಕ್ಷೇತ್ರವು ಹಂತ ಹಂತವಾಗಿ ಅಭಿವೃದ್ಧಿಗೊಂಡು ಯಶಸ್ವಿಯಾಗಿ ಬ್ರಹ್ಮಕಲಶೋತ್ಸವವು ನಡೆದಿದೆ. ಕ್ಷೇತ್ರದ ಅಭವೃದ್ಧಿ ದೃಷ್ಠಿಯಿಂದ ಮುಂದಿನ ದಿನಗಳಲ್ಲಿಯೂ ಎಲ್ಲರ ಸಹಕಾರ ಬೇಕಿದೆ ಎಂದರು.

ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಮಾತನಾಡಿ, ಕುದ್ಮಾರು ಗ್ರಾಮದ ಆಸು ಪಾಸಿನ ಜನತೆಗೆ ಈ ಕ್ಷೇತ್ರವು ಪುಣ್ಯ ಕ್ಷೇತ್ರವಾಗಿದೆ. ಎಲ್ಲ ಜನತೆಯ ಸಹಕಾರದಿಂದ ಕ್ಷೇತ್ರವು ಅಭಿವೃದ್ಧಿಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು. ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ರಮೇಶ್ ಕೆ.ಎನ್ ಕಾರ್ಲಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಜೀರ್ಣವ್ಯವಸ್ಥೆಯಿದ್ದ ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನವು ಭಕ್ತರ ಅವಿರತ ಶ್ರಮದಿಂದ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆದು ಒಂದು ವರ್ಷ ಪೂರೈಸಿ, ಪುನರ್ ಪ್ರತಿಷ್ಟಾ ವಾರ್ಷಿಕೋತ್ವವ ನಡೆಯುತ್ತಿದೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳು ನಡೆದಿದೆ. ಮುಂದಿನ ದಿನಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಯಲ್ಲಿ ಎಲ್ಲರು ಕೈಜೋಡಿಸಬೇಕು ಎಂದರು.

ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ಗೌಡ ಬರೆಪ್ಪಾಡಿ, ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಚೆನ್ನಪ್ಪ ಗೌಡ ನೂಜಿ, ಕುದ್ಮಾರು ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ಬೇರಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಾಲಕೃಷ್ಣ ನೂಜಿ, ರಮೇಶ್ ಕೆ.ಎನ್ ಕಾರ್ಲಾಡಿ, ಲೋಕೇಶ್ ಬಿ.ಎನ್ ಬರೆಪ್ಪಾಡಿ, ರಾಘವೇಂದ್ರ ದೈಪಿಲ, ನಾಗೇಶ್ ಕೆಡೆಂಜಿ, ಬಾಲಚಂದ್ರ ನೂಜಿ, ಗೋಪಾಲಕೃಷ್ಣ ಕಾರ್ಲಾಡಿ ಅತಿಥಿಗಳಿಗೆ ಹೂ ನೀಡಿ ಗೌರವಿಸಿದರು. ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಕೆ.ಎನ್ ಕಾರ್ಲಾಡಿ ಅತಿಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ,ತಾ.ಪಂ.ಮಾಜಿ ಸದಸ್ಯೆ ಲಲಿತಾ ಈಶ್ವರ ಬರೆಪ್ಪಾಡಿ ಸ್ವಾಗತಿಸಿ, ನಾಗೇಶ್ ಕೆ. ಕೆಡೆಂಜಿ ವಂದಿಸಿದರು. ಪುರುಷೋತ್ತಮ ಕುಂಡಡ್ಕ, ಸವಿತಾ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

ಗೌರವಾರ್ಪಣೆ: ಕುದ್ಮಾರು ಗ್ರಾಮದ ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಯಲ್ಲಿ ವಿವಿದ ರೀತಿಯಲ್ಲಿ ಸಹಕರಿಸಿದ ದಾನಿಗಳಿಗೆ ಸ್ಮರಣಿಕೆ, ಶಾಲು ಹಾಕಿ ಗೌರವಾರ್ಪಣೆ ನಡೆಸಲಾಯಿತು.

ಕುದ್ಮಾರು ಗ್ರಾಮದ ಬೇರಿಕೆ ಶ್ರೀ ನಾಗಬ್ರಹ್ಮ ಆದಿಮುಗೇರ್ಕಳ ಮತ್ತು ಕೊರಗಜ್ಜ ದೈವಸ್ಥಾನ ಬೇರಿಕೆ ,ಆದಿಮುಗೇರ್ಕಳ ದೈವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವವು ಫೆ ೨೫, ೨೬ರಂದು ನಡೆಯಿತು. ಫೆ ೨೫ರಂದು ಕ್ಷೇತ್ರದಲ್ಲಿ ಶುದ್ಧ ಕಲಶ ತಂಬಿಲ, ಸಂಜೆ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ದೈವದ ಭಂಡಾರ ತೆಗೆದು, ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ರಾತ್ರಿ ಶ್ರೀ ನಾಗಬ್ರಹ್ಮ ಆದಿ ಮುಗೇರ್ಕಳ ಗರಡಿ ಇಳಿದು ಬಳಿಕ ತನ್ನಿ ಮಾಣಿಗ ಗರಡಿ ಇಳಿಯುವ ಕಾರ್ಯಕ್ರಮ ನಡೆಯಿತು. ಫೆ ೨೬ರಂದು ಬೆಳಿಗ್ಗೆ ಹರಕೆ ಮತ್ತು ಗಂಧ ಪ್ರಸಾದ, ಗುಳಿಗ ದೈವದ ನೇಮೋತ್ಸವ, ಕೊರಗಜ್ಜ ದೈವದ ನೇಮೋತ್ಸವ ನಡೆಯಿತು.

LEAVE A REPLY

Please enter your comment!
Please enter your name here