ಮಂಗಳೂರಿನಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾಪ೯ಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ

0

 

ಮಂಗಳೂರಿನ ಬಾವುಟಗುಡ್ಡೆಯಲ್ಲಿ ಸ್ಥಾಪಿಸಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯ ಲೋಕಾಪ೯ಣೆ ಕಾಯ೯ಕ್ರಮಕ್ಕೆ ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರ ಮುಖಾಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು.

ನ.19 ರಂದು ನಿಗದಿಪಡಿಸಿದ ದಿನಾಂಕವನ್ನು ಮುಖ್ಯಮಂತ್ರಿಯವರು ಬಹುತೇಕ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸಮಿತಿಯ ಗೌರವ ಸಲಹೆಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಸಮಿತಿಯ ಗೌರವಾನ್ವಿತ ಸದಸ್ಯ ಭಾಸ್ಕರ್ ದೇವಸ್ಯ, ಅಕ್ಷಯ್ ಕುರುಂಜಿ, ಸಮಿತಿಯ ಬೆಂಗಳೂರು ಮಡಿಕೇರಿ ಪ್ರಧಾನ ಸಂಚಾಲಕ ತೇನನ ರಾಜೇಶ್ ಸೋಮಣ್ಣ, ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ, ರಜತ್ ಅಡ್ಕಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here