ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಪೋಲಿಯೊ ಲಸಿಕೆ ಅಭಿಯಾನ

0

ಉಪ್ಪಿನಂಗಡಿ: ರೋಟರಿ ಕ್ಲಬ್ ಉಪ್ಪಿನಂಗಡಿ ಮತ್ತು ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ ಇದರ ಸಹಯೋಗದೊಂದಿಗೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಪೋಲಿಯೊ ಲಸಿಕೆ ಅಭಿಯಾನ ಕಾರ್ಯಕ್ರಮ ಫೆ.27ರಂದು ಹಮ್ಮಿಕೊಳ್ಳಲಾಗಿತ್ತು. ಉಪ್ಪಿನಂಗಡಿ ಗ್ರಾ.ಪಂ.ನ ಅಧ್ಯಕ್ಷ ಉಷಾಚಂದ್ರ ಮುಳಿಯ ಚಾಲನೆ ನೀಡಿದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಮುಶಾಕಿರ್, ಡಾ.ಕೃಷ್ಣಾನಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಲಸಿಕೆಯ ಮಹತ್ವ ಮತ್ತು ಅದರ ಮಾಹಿತಿಯನ್ನು ಸಾರ್ವಜನಿಕ ತಿಳಿಸಿದರು. ರೋಟರಿ ಕ್ಲಬ್ ಅಧ್ಯಕ್ಷ ನೀರಜ್ ಕುಮಾರ್ ಸ್ವಾಗತಿಸಿ ಶ್ರೀಕಾಂತ್ ಪಟೇಲ್ ವಂದಿಸಿದರು.

LEAVE A REPLY

Please enter your comment!
Please enter your name here