ಐನೆಕಿದು ಶಾಲೆಗೆ ಕಂಪ್ಯೂಟರ್ ಕೊಡುಗೆ

0

 

ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಐನೆಕಿದು ಶಿವಕುಮಾರ್ ಕೂಜುಗೋಡು ಅವರ ಮಕ್ಕಳಾದ ಧನ್ವಿನಿ ಹಾಗೂ ದಕ್ಷ ಇವರು 4 ಕಂಪ್ಯೂಟರುಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕಂಪ್ಯೂಟರ್ ಜ್ಞಾನವನ್ನು ಹೊಂದಬೇಕು.ಅದಕ್ಕಾಗಿ ತನ್ನ ಮಕ್ಕಳ ಹೆಸರಿನಲ್ಲಿ ಈ ಕೊಡುಗೆಯನ್ನು ನೀಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಮಕ್ಕಳ ಕಂಪ್ಯೂಟರ್ ಜ್ಞಾನವು ಉತ್ತಮವಾಗಿ ಪ್ರಗತಿದಾಯಕವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಎಸ್. ಡಿ.ಎಂ.ಸಿ. ಅಧ್ಯಕ್ಷ ನವೀನ್ ಕಟ್ರಮನೆ ಮತ್ತು ಸದಸ್ಯರು, ಮುಖ್ಯಶಿಕ್ಷಕಿ ಸರಿತಾ ಹಾಗೂ ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here